104 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಭೂಪ!

ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಎಷ್ಟು ಬಾರಿ ಸಂಚಾರಿ ನಿಯಮ ಉಲ್ಲಂಘಿಸಬಹುದು? ಎರಡು-ಮೂರು ಬಾರಿ? ಆದರೆ, ಇಲ್ಲೋರ್ವ ವ್ಯಕ್ತಿ ಬರೋಬ್ಬರಿ 104 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ!
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು:  ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಎಷ್ಟು ಬಾರಿ ಸಂಚಾರಿ ನಿಯಮ ಉಲ್ಲಂಘಿಸಬಹುದು? ಎರಡು-ಮೂರು ಬಾರಿ? ಆದರೆ, ಇಲ್ಲೋರ್ವ ವ್ಯಕ್ತಿ ಬರೋಬ್ಬರಿ 104 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ!

 ಸಂಚಾರ ನಿಯಮ ಉಲ್ಲಂಘಿಸುವವರಿಗೆ ವಿಧಿಸುವ ದಂಡದ ಮೊತ್ತ ಹೆಚ್ಚಳ ಮಾಡಿದ್ದ ಸರ್ಕಾರ, ಆ ದಂಡದ ಮೊತ್ತವನ್ನು ಈಗಾಗಲೇ ಇಳಿಕೆ ಮಾಡಿದೆ.

 ಈ ಬೆಳವಣಿಗೆಯ ನಡುವೆ 104 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಮೊಹಮ್ಮದ್ ಶಬ್ಬೀರ್ ಎಂಬಾತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಹಲವು ತಿಂಗಳಲ್ಲಿ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನದಲ್ಲಿ ಓಡಾಡುತ್ತಿದ್ದ ಜಾಲಹಳ್ಳಿ ನಿವಾಸಿ ಶಬ್ಬೀರ್ 10 ಸಾವಿರ ರೂ. ದಂಡ ವಿಧಿಸಿರುವುದಾಗಿ ಜಾಲಹಳ್ಳಿ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com