ಕೆಆರ್ ಎಸ್ ಒಳ,ಹೊರ ಹರಿವು ಹೆಚ್ಚಳ:  ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ  ಸೂಚನೆ

ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಲ್ಲಿನ ಒಳ ಹಾಗೂ ಹೊರ ಹರಿವಿನಲ್ಲಿ ಮತ್ತೆ  ಹೆಚ್ಚಳವಾಗಿದೆ.
ಕೃಷ್ಣರಾಜಸಾಗರ
ಕೃಷ್ಣರಾಜಸಾಗರ
Updated on

ಮಂಡ್ಯ : ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಲ್ಲಿನ ಒಳ ಹಾಗೂ ಹೊರ ಹರಿವಿನಲ್ಲಿ ಮತ್ತೆ  ಹೆಚ್ಚಳವಾಗಿದೆ.

ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಸುಮಾರು 10 ಸಾವಿರದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ  ಬಿಡಲು ನಿರ್ಧರಿಸಲಾಗಿದೆ. ಈ ಪ್ರಮಾಣ ಇನ್ನೂ ಹೆಚ್ಚಾಗುವ ಸಂಭವವಿರುತ್ತದೆ.  ಆದ್ದರಿಂದ ಕಾವೇರಿ ತಗ್ಗು ಪ್ರದೇಶದಲ್ಲಿನ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರಗಳನ್ನು ರಕ್ಷಣೆಗೆ ಎಚ್ಚರಿಕೆ ವಹಿಸಿ  ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ  ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com