ಶಾಸಕ ಜಮೀರ್ ಅಹ್ಮದ್‌ಗೆ ಲಘು ಹೃದಯಾಘಾತ, ಶಸ್ತ್ರ ಚಿಕಿತ್ಸೆ ಯಶಸ್ವಿ

ಲಘು ಹೃದಯಾಘಾತವಾಗಿ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಲಘು ಹೃದಯಾಘಾತವಾಗಿ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮೂಲಗಳ ಪ್ರಕಾರ ಜಮೀರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರಿಗೆ  ಸ್ಟೆಂಟ್ ಅಳವಡಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಇನ್ನು ಜಮೀರ್ ಅಹ್ಮದ್ ಖಾನ್ ಇತ್ತೀಚೆಗೆ ಭಾರಿ ಸುದ್ದಿಗೆ ಗ್ರಾಸವಾಗಿರುವ ಐಎಂಎ ಜ್ಯುವೆಲ್ಸ್ ವಂಚನೆ ಕೇಸ್ ನಲ್ಲೂ ಜಮೀರ್ ಅವರ ಹೆಸರು ಕೇಳಿಬಂದಿತ್ತು. ಅಲ್ಲದೆ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com