ಎನ್ಆರ್'ಸಿ ಜಾರಿಗೆ ಸರ್ಕಾರ ಸಿದ್ಧ: ಅಕ್ರಮ ವಲಸಿಗರ ಬಂಧನದಲ್ಲಿಡಲು ನಿರಾಶ್ರಿತ ಕೇಂದ್ರ ನಿರ್ಮಾಣ

ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ನಡೆಸಿದ್ದು, ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗಡಿಪಾರು ಮಾಡುವವರೆಗೂ ಇರಿಸಲು ಬಂಧನ ಕೇಂದ್ರವನ್ನು ನಿರ್ಮಾಣ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ನಡೆಸಿದ್ದು, ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗಡಿಪಾರು ಮಾಡುವವರೆಗೂ ಇರಿಸಲು ಬಂಧನ ಕೇಂದ್ರವನ್ನು ನಿರ್ಮಾಣ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು ಹೊರವಲಯದ ನೆಲಮಂಗಲದ ಸಮೀಪ ವಿದೇಶೀಯರ ಮೊದಲ ನಿರಾಶ್ರಿತರ ಕೇಂದ್ರಕ್ಕೆ ಚಾಲನೆ ನೀಡಲು ರಾಜ್ಯ ಸರ್ಕಾರ ಭರದ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. 

ನೆಲಮಂಗಲ ಹತ್ತಿರದ ಸೊಂಡೆಕೊಪ್ಪದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯವನ್ನು ನಿರಾಶ್ರಿತರ ಕೇಂದ್ರವನ್ನಾಗಿ ಪರಿವರ್ತನೆಗೊಳಿಸಲಾಗುತ್ತಿದ್ದು, ಅದರ ಕಾಮಗಾರಿಗಳು ಅಂತಿಮ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. 

1992ರಲ್ಲಿ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ನೆಲಮಂಗಲ ಸಮೀಪದ ಸೊಂಡೆಕೊಪ್ಪದಲ್ಲಿ ಎಸ್'ಸಿ, ಎಸ್ಟಿ, ಒಬಿಪಿ ವಿದ್ಯಾರ್ಥಿಗಳ ವಸತಿ ನಿಲಯವನ್ನು ಸ್ಥಾಪನೆ ಮಾಡಿತ್ತು. ವಿದ್ಯಾರ್ಥಿಗಳು ಕಡಿಮಯಾದ ಹಿನ್ನಲೆಯಲ್ಲಿ 2008ರಲ್ಲಿ ಇದನ್ನು ಮುಚ್ಚಲಾಗಿತ್ತು. ಅದನ್ನು ನಿರಾಶ್ರಿತರ ಕೇಂದ್ರವಾಗಿ ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು. ಸಮಾಜ ಕಲ್ಯಾಣ ಇಲಾಖೆ ಒಪ್ಪಿಗೆ ಪಡೆದ ಬಳಿಕ ಗೃಹ ಇಲಾಖೆ ಅದರ ನವೀಕರಣಕ್ಕೆ ಚಾಲನೆ ನೀಡಿತು ಎಂದು ಹೇಳಲಾಗುತ್ತಿದೆ. 

ಕಟ್ಟಡಲ್ಲಿ ಆರು ಕೊಠಡಿಗಳು, ಒಂದು ಅಡುಗೆ ಮನೆ, ಉಗ್ರಾಣ ಹಾಗೂ ಶೌಚಾಲಯಗಳಿವೆ. ಇದು ನಿರ್ಬಂಧಿತ ಪ್ರದೇಶವಾಗಿದ್ದು, ಸುತ್ತಲು 4 ಸುತ್ತು ತಂತಿ ಬೇಲಿಯನ್ನು ಹಾಕಲಾಗಿದೆ. ಅಲ್ಲದೆ, 10 ಅಡಿ ಎತ್ತರದ ಗೋಡೆಗಳ ನಿರ್ಮಾಣ ಮಾಡಲಾಗಿದೆ. ಕಟ್ಟಡದ ಎರಡೂ ಕಡೆ ವೀಕ್ಷಣಾ ಗೋಪುರ ಕಟ್ಟಲಾಗಿದ್ದು, ದಿನದ 24 ಗಂಟೆಗಳೂ ಕೂಡ ಭದ್ರತಾ ಸಿಬ್ಬಂದಿಗಳು ಹದ್ದಿನ ಕಣ್ಣಿಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com