ಅಲಯನ್ಸ್ ವಿವಿ ಮಾಜಿ ಕುಲಪತಿ ಅಯ್ಯಪ್ಪ ದೊರೆ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಅಲಯನ್ಸ್ ವಿಶ್ವವಿದ್ಯಾಲಯ ಮಾಜಿ ಕುಲಪತಿ ಅಯ್ಯಪ್ಪ ದೊರೆ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಅಯ್ಯಪ್ಪ ದೊರೆ
ಅಯ್ಯಪ್ಪ ದೊರೆ

ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯ ಮಾಜಿ ಕುಲಪತಿ ಅಯ್ಯಪ್ಪ ದೊರೆ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

30 ವರ್ಷದ ಗಣೇಶ್ ಬಂಧಿತ ಆರೋಪಿ. ಆರೋಪಿ ಸಂಜಯ ನಗರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದರು.

ಗಣೇಶ್​, ಹೆಬ್ಬಾಳ ಫ್ಲೈ ಓವರ್ ಬಳಿ ತೆರಳುತ್ತಿದ್ದಾಗ, ಆರ್​.ಟಿ ನಗರ ಪೊಲೀಸರು ಆತನನ್ನು ಬಂಧಿಸಲು ಮುಂದಾಗಿದ್ದರು. ತನನ್ನನ್ನು ಬಂಧಿಸಲು ಪೊಲೀಸರು ಆಗಮಿಸಿದ್ದಾರೆಂಬ ಮಾಹಿತಿ ತಿಳಿದ ಕೂಡಲೇ ಆರೋಪಿ ಗಣೇಶ್ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಪಿಎಸ್ಐ ಯಲ್ಲವ್ವ ಹಾಗೂ ಪೇದೆ ಮಲ್ಲಿಕಾರ್ಜುನ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. 

ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಶರಣಾಗುವಂತೆ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಆರೋಪಿ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಎಡಗಾಲಿಗೆ ಗುಂಡು ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. 

ಅಯ್ಯಪ್ಪ ದೊರೆ ಹತ್ಯೆಗೆ ಸಂಪೂರ್ಣ ಯೋಜನೆ ರೂಪಿಸಿ, ಅದನ್ನು ಕಾರ್ಯರೂಪಕ್ಕೆ ತಂದಿದ್ದು ಹಾಗೂ ಸುಪಾರಿ ಹಂತಕರಿಗೆ ಮಾರಕಾಸ್ತ್ರಗಳನ್ನು ಪೂರೈಕೆ ಮಾಡಿದ್ದೆ ಗಣೇಶ್ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಗುಂಡೇಟು ತಿಂದ ಗಣೇಶ್, ಪಿಎಸ್ಐ ಯಲ್ಲವ್ವ ಹಾಗೂ ಪೇದೆ ಮಲ್ಲಿಕಾರ್ಜುನ್ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com