ಜನವರಿಯಲ್ಲಿ "ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ": ಪ್ರಹ್ಲಾದ ಜೋಶಿ

ಜನವರಿ 17ರಂದು ಹುಬ್ಬಳ್ಳಿಯಲ್ಲಿ " "ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ" ನಡೆಯಲಿದ್ದು, ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಧ್ಯಕ್ಷತೆಯಲ್ಲಿ ಕುಮಾರ ಕೃಪ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಇನ್ವೆಸ್ಟ್ ಇನ್ ಕರ್ನಾಟಕ ಸಮ್ಮೇಳನದ ಸಾಂದರ್ಭಿಕ ಪೋಸ್ಟರ್
ಇನ್ವೆಸ್ಟ್ ಇನ್ ಕರ್ನಾಟಕ ಸಮ್ಮೇಳನದ ಸಾಂದರ್ಭಿಕ ಪೋಸ್ಟರ್
Updated on

ಬೆಂಗಳೂರು: ಜನವರಿ 17ರಂದು ಹುಬ್ಬಳ್ಳಿಯಲ್ಲಿ " "ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ" ನಡೆಯಲಿದ್ದು, ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಧ್ಯಕ್ಷತೆಯಲ್ಲಿ ಕುಮಾರ ಕೃಪ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಪ್ರಹ್ಲಾದ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯಮ ತೆರೆಯಲು ಪ್ರಸಕ್ತವಾದ ವಾತಾವರಣವಿದೆ. ಜೊತೆಗೆ ಆ ಭಾಗದಲ್ಲಿ ಕೌಶಲ್ಯ ತರಬೇತಿ ನೀಡುವುದರಿಂದ ಮಾನವ ಸಂಪನ್ಮೂಲ ಕೂಡ ಹೆಚ್ಚಲಿದೆ. ಸಾರಿಗೆ ಸಂಪರ್ಕಕ್ಕೆ ವಿಮಾನ ನಿಲ್ದಾಣವೂ ಇರುವುದರಿಂದ ಉದ್ಯಮಿಗಳಿಗೆ ಇಲ್ಲಿ ಹೂಡಿಕೆ ಮಾಡಲು ಸೂಕ್ತ ರೀತಿಯ ವ್ಯವಸ್ಥೆಯೂ ಆಗಲಿದೆ. ಈ ನಿಟ್ಟಿನಲ್ಲಿ ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಈ ಭಾಗದಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯುವುದರಿಂದ ಈ ಭಾಗದ ಯುವಕರಿಗೆ ವೃತ್ತಿಪರ ತರಬೇತಿ ನೀಡಿ ಉದ್ಯೋಗ ಪಡೆದುಕೊಳ್ಳಲು ಸಹಕಾರಿಯಾಗಲಿದೆ. ತರಬೇತಿ ಜೊತೆಗೆ ಉದ್ಯೋಗದಲ್ಲಿ ಖಾತ್ರಿ ಸಹ ನೀಡಿದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ. ಈ ನಿಟ್ಟಿನಲ್ಲಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಹುಬ್ಬಳ್ಳಿ ಭಾಗದಲ್ಲಿ ಯಾವ ವಲಯಗಳಲ್ಲಿ ಕೈಗಾರಿಕೆಗೆ ಪೂರಕ ವಾತಾವರಣವಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ. ಡಿಫೆನ್ಸ್ ಅಥವಾ ಇತರೆ ಕೈಗಾರಿಕಾ ತಯಾರಿಕಾ ಘಟಕ ಸ್ಥಾಪನೆಗೆ ಈ ಪ್ರದೇಶ ಪ್ರಸ್ತುತ ಎಂಬುದನ್ನು ತಿಳಿದುಕೊಳ್ಳಲು ಅಭಿಪ್ರಾಯ ಸಂಗ್ರಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ಕೈಗಾರಿಕಾ ಮುಖ್ಯಸ್ಥರು, ಕೈಗಾರಿಕಾ ಸಂಘಸಂಸ್ಥೆ ಸಂಬಂಧಪಟ್ಟವರೊಂದಿಗೆ ಪ್ರಾಥಮಿಕ ಸಭೆ ಆಯೋಜಿಸುವಂತೆಯೂ ಸೂಚಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ ಗೌರವ್‌ ಗುಪ್ತ ಮಾತನಾಡಿ, ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನದ ಭಾಗವಾಗಿ ನವೆಂಬರ್ ತಿಂಗಳಿಂದ ಜನವರಿ ವರೆಗೂ ಹೈದರಾಬಾದ್, ಮುಂಬೈ, ಕರ್ನಾಟಕದಲ್ಲಿ ರೋಡ್‌ ಶೋ ನಡೆಸಲು ಕಾರ್ಯಕ್ರಮ ರೂಪಿಸಲಾಗಿದೆ. ಜನವರಿ ತಿಂಗಳಲ್ಲಿ ನಡೆಯುವ ಸಮ್ಮೇಳನದಲ್ಲಿ 500ಕ್ಕೂ ಹೆಚ್ಚು ಉದ್ದಿಮೆದಾರರನ್ನು ಆಕರ್ಷಿಸುವ ಗುರಿ ಹೊಂದಲಾಗಿದೆ. ಜೊತೆಗೆ ವಿವಿದ ಸೆಕ್ಟರ್‌ಗಳ ಕುರಿತು ವಿಚಾರ ಸಂಕಿರಣ ಕೂಡ ನಡೆಯಲಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com