ಭೀಕರ ಪ್ರವಾಹದ ನಡುವೆಯೂ ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ! 

ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ ಬರ ಪೀಡಿ ತಾಲೂಕುಗಳಾಗಿವೆ ಇಲ್ಲಿ, ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ.

ಗಂಗಾವತಿ, ರಾಯಚೂರು ಮಾನ್ವಿ, ರಾಯಚೂರು, ಸಿಂಧನೂರು, ಕಲಬುರಗಿ ಜಿಲ್ಲೆಯ ಚಿಂಚೋಳಿ, ಜೇವರ್ಗಿ, ಸೇಡಂ, ಯಾದಗಿರಿ ತಾಲೂಕು, ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಬಾದಾಮಿ, ಬೀಳಗಿ, ಜಮಖಂಡಿ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ, ಸಿಂಧಗಿ, ವಿಜಯಪುರ ಹಾಗೂ ಗದಗ ಜಿಲ್ಲೆಯ ನಗರಗುಂದ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com