ಸಾಂಧರ್ಬಿಕ ಚಿತ್ರ
ಸಾಂಧರ್ಬಿಕ ಚಿತ್ರ

ಗುಲ್ಬರ್ಗಾ ವೈದ್ಯಕೀಯ ಕಾಲೇಜಿನ 21ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಡಿಫ್ತೀರಿಯಾ ಸೋಂಕು! 

ಗುಲ್ಬರ್ಗಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಜಿಮ್ಸ್) ವೈದ್ಯಕೀಯ ಕಾಲೇಜಿನ 21ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಮಾರಕ ಡಿಫ್ತೀರಿಯಾ ಸೋಂಕು ತಗುಲಿರುವ ಶಂಕೆಗಳು ವ್ಯಕ್ತವಾಗಿದೆ.

ಕಲಬುರಗಿ: ಗುಲ್ಬರ್ಗಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಜಿಮ್ಸ್) ವೈದ್ಯಕೀಯ ಕಾಲೇಜಿನ 21ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಮಾರಕ ಡಿಫ್ತೀರಿಯಾ ಸೋಂಕು ತಗುಲಿರುವ ಶಂಕೆಗಳು ವ್ಯಕ್ತವಾಗಿದೆ. 

ಶನಿವಾರ ವಿದ್ಯಾರ್ಥಿನಿಯರು ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದರಿಂದ ಡಿಫ್ತೀರಿಯಾ ಸೋಂಕು ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಮಹಿಳಾ ವಸತಿ ನಿಲಯದ 110 ವಿದ್ಯಾರ್ಥಿನಿಯರು ಹಾಗೂ 30 ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. 

ಈ ವೇಳೆ ಒಟ್ಟು 21ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಡಿಫ್ತೀರಿಯಾ ಸೋಂಕು ತಗುಲಿರುವ ಲಕ್ಷಣಗಳು ಕಂಡು ಬಂದಿದೆ. ಮಾರಕ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸೋಂಕು ಹೆಚ್ಚಾಗುವ ಸಾಧ್ಯತೆಗಳು ಕಂಡು ಬಂದ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಗಳನ್ನು ಪ್ರಾರಂಭಿಸಲಾಗಿದೆ. 

ಸೋಂಕು ತಗುಲಿರುವ ಎಲ್ಲಾ ವಿದ್ಯಾರ್ಥಿನಿಯರ ಸ್ಥಿತಿ ಉತ್ತಮವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com