

ಪುತ್ತೂರು: ಗಣೇಶ ಚತುರ್ಥಿ ಹಬ್ಬದಂದೇ ಜವರಾಯ ಅಬ್ಬರಿಸಿದ್ದು ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚಾರಿನಲ್ಲಿ ನಡೆದಿದೆ.
ಮೃತರೆಲ್ಲರೂ ಶುಂಠಿಕೊಪ್ಪ ನಿವಾಸಿಗಳಾಗಿದ್ದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.ಮೃತರು ಮಂಗಳೂರಿನಿಂದ ವಾಪಾಸಾಗುತ್ತಿದ್ದರು ಎನ್ನಲಾಗಿದೆ.
ಸಧ್ಯ ಸ್ಥಳಕ್ಕೆ ಅಗ್ನಿಶಾಮಕ ಪಡೆ, ಪೋಲೀಸರು ಆಗಮಿಸಿ ಕಾರನ್ನು ನೀರಿನಿಂದ ಮೇಲೆತ್ತುವ ಕಾರ್ಯ ಕೈಗೊಂಡಿದ್ದಾರೆ. ಘಟನೆ ಸಂಬಂಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ