ಡಿಕೆಶಿ ಬಂಧನ ವಿರೋಧಿಸಿ ರಾಮನಗರ, ಕನಕಪುರ, ಬಳ್ಳಾರಿಯಲ್ಲಿ ತೀವ್ರ ಪ್ರತಿಭಟನೆ 

ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಶಿವಕುಮಾರ್ ಅಭಿಮಾನಿಗಳು  ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಪ್ರತಿಭಟನೆ
Updated on: 

ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಶಿವಕುಮಾರ್ ಅಭಿಮಾನಿಗಳು  ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಡಿಕೆ ಶಿವಕುಮಾರ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ  ರಾಮನಗರದ ಐಜೂರು ವೃತ್ತದಲ್ಲಿ ಜಮಾಯಾಸಿದ ಕಾಂಗ್ರೆಸ್ ಕಾರ್ಯಕರ್ತರು ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಮೈಸೂರು- ಬೆಂಗಳೂರು ರಸ್ತೆಯಲ್ಲಿ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಯಿತು.

ಕನಕಪುರದಲ್ಲೂ ರಸ್ತೆಗಿಳಿದ ಡಿಕೆ ಶಿವಕುಮಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲೆಸೆದು ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಅತ್ತ ಬಳ್ಳಾರಿಯ ರಾಯಲ್ ವೃತ್ತದಲ್ಲೂ ತೀವ್ರ ಪ್ರತಿಭಟನೆ ನಡೆಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com