ಕಾಂಗ್ರೆಸ್ ಕಾರ್ಯಕರ್ತರು ಬಸ್ ಗಳಿಗೆ ಬೆಂಕಿ ಹಚ್ಚಿಲ್ಲ: ಸಿದ್ದರಾಮಯ್ಯ

ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಸ್ ಗಳಿಗೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ, ಇದು ಕಿಡಗೇಡಿಗಳ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಹುಬ್ಬಳ್ಳಿ: ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಸ್ ಗಳಿಗೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ, ಇದು ಕಿಡಗೇಡಿಗಳ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಬಂಧನ ಸಂಪೂರ್ಣ ರಾಜಕೀಯ ಪ್ರೇರಿತ. ಕೇಂದ್ರ ಬಿಜೆಪಿ, ಸರ್ಕಾರಿ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ.  ಪ್ರತಿಭಟನೆಯಲ್ಲಿ ಕೆಲ ಕಿಡಿಗೇಡಿಗಳು ಬಸ್ ಗಳಿಗೆ ಬೆಂಕಿ ಹಚ್ಚಿದ್ದಾರೆಯೇ ಹೊರತು ಇದರಲ್ಲಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿಲ್ಲ ಎಂದರು.

ನೆರೆ ಸಂತ್ರಸ್ತರ ರಕ್ಷಣೆ, ಅವರಿಗೆ ಬದುಕು ಕಟ್ಟಿಕೊಡಲು ಹಾಗೂ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೊಂದು ಕಣ್ಣು, ಕಿವಿ ಇಲ್ಲದ ಅಂಗವಿಕಲ ಸರ್ಕಾರ. ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಷೆಡ್ ಗಳನ್ನು ನಿರ್ಮಿಸಿಕೊಡುವಂತೆ ಸೂಚಿಸಿದ್ದರೂ ಸಹ ಸರ್ಕಾರ ಇದೂವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com