ನಗರ ಪ್ರದಕ್ಷಿಣೆ ಮಾಡಿದ ಸಿಎಂ ಯಡಿಯೂರಪ್ಪ; ಎಲ್ಲೆಡೆ ಸಮಸ್ಯೆಗಳ ದರ್ಶನ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಇಂದು ಮೊದಲ ಬಾರಿಗೆ ನಗರ ಪ್ರದಕ್ಷಿಣೆ ನಡೆಸಿದರು.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಇಂದು ಮೊದಲ ಬಾರಿಗೆ ನಗರ ಪ್ರದಕ್ಷಿಣೆ ನಡೆಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ ಬಸ್‌ನಲ್ಲಿ ಹೊರಟ ಮುಖ್ಯಮಂತ್ರಿ ನಗರದ ಹಲವೆಡೆ ತೆರಳಿ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ, ಜನರ ಸಮಸ್ಯೆ ಆಲಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ಪ್ರತೀ 15 ದಿನಗಳಿಗೊಮ್ಮೆ ನಗರ ಪ್ರದಕ್ಷಿಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಗೃಹಕಚೇರಿ‌ ಕೃಷ್ಣಾದಿಂದ ಪರಿವೀಕ್ಷಣೆ ಆರಂಭಿಸಿದ ಯಡಿಯೂರಪ್ಪ ಅವರಿಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಆರ್.ಅಶೋಕ್, ಶಾಸಕರಾದ ಅರವಿಂದ್ ಲಿಂಬಾವಳಿ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದು, ಬಸ್ ಗಳಲ್ಲಿ ಪರಿವೀಕ್ಷಣೆ ನಡೆಸಿದರು. ಮುಖ್ಯಮಂತ್ರಿಗಳ ನಗರ ಪರಿವೀಕ್ಷಣೆ ನಡೆಸುವ ಸ್ಥಳಗಳಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು.

ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ವರೆಗಿನ ಮೆಟ್ರೋ ‌ಕಾಮಗಾರಿ ಪರಿವೀಕ್ಷಿಸಿ ಕೆ.ಆರ್.ಪುರಂ ರೈಲ್ವೆ ನಿಲ್ದಾಣ ಪರಿಶೀಲನೆ‌ ನಡೆಸಿ ಈ ಸಂಬಂಧ ಅಧಿಕಾರಿಗಳೊಂದಿಗೆ ಯಡಿಯೂರಪ್ಪ ಚರ್ಚೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com