ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ಸದ್ಯದಲ್ಲಿಯೇ ರೈಲು ಸೇವೆ; ಕೇಂದ್ರ ಸಚಿವ ಸುರೇಶ್ ಅಂಗಡಿ 

ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ ರೈಲು ಸಂಚಾರ ಆರಂಭಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ. 
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ
Updated on: 

ಬೆಂಗಳೂರು: ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ ರೈಲು ಸಂಚಾರ ಆರಂಭಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ರೈಲು ಸೇವೆ ಒದಗಿಸಿಕೊಡುವಂತೆ ಮನವಿ ಮಾಡಿದ್ದರು.


ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ ಕೆ ಸಿಂಗ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಎ ಕೆ ವರ್ಮ, ಕೆ-ರೈಡ್ ವ್ಯವಸ್ಥಾಪಕ ಸಂಪಾದಕ ಅಮಿತ್ ಗಾರ್ಗ್, ಮುಖ್ಯ ಆಡಳಿತಾತ್ಮಕ ಅಧಿಕಾರಿ ಕೆ ಸಿ ಸ್ವಾಮಿ ನಿನ್ನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಹಾಜರಿದ್ದರು.


ಸಿಎಂ ಜೊತೆಗೆ ಸುಮಾರು 50 ನಿಮಿಷಗಳ ಕಾಲ ಸಂವಾದ ನಡೆಸಿದ ನಂತರ ಕೇಂದ್ರ ಸಚಿವ ಸುರೇಶ್ ಅಂಗಡಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿ, ಈಗಿರುವ ಶಿವಮೊಗ್ಗ-ಬೆಂಗಳೂರು ರೈಲನ್ನು ಚೆನ್ನೈಯವರೆಗೆ ಮುಂದುವರಿಸಲು ಮತ್ತು ಹೊಸ ರೈಲನ್ನು ಶಿವಮೊಗ್ಗದಿಂದ ತಿರುಪತಿಗೆ ಸಂಚರಿಸುವಂತೆ ಮಾಡಲಾಗುವುದು. ತಿರುಪತಿ ಮತ್ತು ಚೆನ್ನೈಗೆ ಶಿವಮೊಗ್ಗದಿಂದ ಇನ್ನೂ ರೈಲು ಸಂಚಾರ ಆರಂಭಗೊಂಡಿಲ್ಲ ಎಂದು ಹೇಳಿದರು.


ಈ ಕುರಿತು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪತ್ರಿಕೆ ಜೊತೆ ಮಾತನಾಡಿ, ದಕ್ಷಿಣ ರೈಲ್ವೆ ಮತ್ತು ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಜೊತೆ ಮಾತುಕತೆ ನಡೆಸುತ್ತಿದ್ದು ಶಿವಮೊಗ್ಗದಲ್ಲಿ ಪಿಟ್ ಲೈನ್ ಸಿದ್ದವಾಗಬೇಕಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com