ಸೆಪ್ಟಂಬರ್ 27ರಂದು ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ಸೆಪ್ಟಂಬರ್ 27ರಂದು ನಡೆಯಲಿದೆ.
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ಸೆಪ್ಟಂಬರ್ 27ರಂದು ನಡೆಯಲಿದೆ.

ಅಂದು ಬೆಳಗ್ಗೆ 11.30ಕ್ಕೆ ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು  ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಲಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಉಪಮೇಯರ್‌ ಭದ್ರೇಗೌಡ ಅವರ ಅಧಿಕಾರಾವಧಿ ಸೆಪ್ಟಂಬರ್‌ 28ಕ್ಕೆ ಮುಗಿಯಲಿದೆ. ಈಗಾಗಲೇ ಚುನಾವಣೆಗೆ ಮತದಾರ ಪಟ್ಟಿ ಸಿದ್ಧಗೊಂಡಿದೆ. ಈ ಬಾರಿಯ ಚುನಾವಣೆಗೆ ಒಟ್ಟು 257 ಮತದಾರರಿದ್ದು, ಯಾವುದೇ ಪಕ್ಷ ಗೆಲ್ಲಲು 128 ಮತಗಳು ಬೇಕಾಗುತ್ತದೆ.

ಸರ್ಕಾರ ಬದಲಾಗಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿ ಬಿಜೆಪಿ ಪಾಲಿಕೆ ಅಧಿಕಾರ ಹಿಡಿಯಲು ಸರ್ವ ಪ್ರಯತ್ನ ನಡೆಸುತ್ತಿದೆ. ಏಳು ಜನ ಪಕ್ಷೇತರ ಸದಸ್ಯರ ಪೈಕಿ ಕನಿಷ್ಠ ನಾಲ್ವರು ಸದಸ್ಯರ ಬೆಂಬಲ ಅಗತ್ಯವಾಗಿದೆ. ಬಿಇಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕೇಳಿಬರುತ್ತಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com