ಕರ್ನಾಟಕ ಪ್ರವಾಹ: ಪ್ರತಿಭಟನೆ ಬೆದರಿಕೆ ಹಾಕಿದ ಕಾಂಗ್ರೆಸ್

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ಇದೀಗ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಗುರುವಾರ ಬೆದರಿಕೆ ಹಾಕಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಪ್ರವಾಹರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ಇದೀಗ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಗುರುವಾರ ಬೆದರಿಕೆ ಹಾಕಿದೆ. 

ಪ್ರವಾಹ ಪೀಡಿತ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವುದರಲ್ಲಿ, ಪುನರ್ವಸತಿ ಕಲ್ಪಿಸುವುದರಲ್ಲಿ ವಿಫವಾಗಿದ್ದೇ ಆದರೆ, ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ. 

ಕಂದಾಯ ಸಚಿವ ಆರ್.ಅಶೋಕ್ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಮನೆಗಳನ್ನು ಕಟ್ಟಿಸಿಕೊಡುವುದಾಗಿ ಹೇಳಿದ್ದರು. ಕೊಟ್ಟಿರುವ ಆಶ್ವಾಸನೆ ಪೂರ್ಣಗೊಳಿಸದೇ ಹೋದಲ್ಲಿ ಪ್ರತಿಭಟನೆ ನಡೆಸುತ್ತೇವೆಂದು ಪಾಟೀಲ್ ಅವರು ಹೇಳಿದ್ದಾರೆ. 

ಪ್ರವಾಹ ಪೀಡಿತರಿಗೆ ಸರ್ಕಾರ ಕನಿಷ್ಟ ರೂ.10 ಸಾವಿರ ಕೂಡ ನೀಡಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com