ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಮದನಿ ಆರೋಗ್ಯ ಸ್ಥಿತಿ ಗಂಭೀರ

2008ರ ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಹಾಗೂ ಕೇರಳ ಮೂಲದ ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸಿರ್ ಮದನಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಅಬ್ದುಲ್ ಮದನಿ
ಅಬ್ದುಲ್ ಮದನಿ
Updated on

ಬೆಂಗಳೂರು: 2008ರ ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಹಾಗೂ ಕೇರಳ ಮೂಲದ ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸಿರ್ ಮದನಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಸಮೇತನಹಳ್ಳಿಯಲ್ಲಿರುವ ಸೌಕ್ಯ ಹೊಲಿಸ್ಟಿಕ್ ಆರೋಗ್ಯ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಮೂರು ನಾಲ್ಕು ದಿನಗಳ ಹಿಂದೆ ಮದನಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

2010ರ ಆಗಸ್ಟ್ 17 ರಂದು ಕೇರಳ ಪೊಲೀಸರು ಮದನಿಯನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿತ್ತು. 

2014ರ ಜುಲೈ ತಿಂಗಳಿನಲ್ಲಿ ಷರತ್ತುಬದ್ಧ ಜಾಮೀನು ನೀಡಲಾಗಿತ್ತು, ಮದನಿಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿಡಲಾಗಿದೆ, ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com