ಬೆಂಗಳೂರು: 'ಕಾವೇರಿ ಕೂಗು' ಅಭಿಯಾನದಡಿ ಸಾರ್ವಜನಿಕರಿಂದ ಹಣ ಸಂಗ್ರಹಕ್ಕೆ ಮುಂದಾಗಿರುವ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಷನ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
'ಕಾವೇರಿ ಕೂಗು ' ಅಭಿಯಾನದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಇಶಾ ಫೌಂಡೇಷನ್ ವಿರುದ್ಧ ವಕೀಲ ಎ.ವಿ.ಅಮರನಾಥ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ , ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
Advertisement