ಚಳಿಗಾಲ ಅಧಿವೇಶನ ಕುರಿತು ಕಾಂಗ್ರೆಸ್ ಟೀಕೆಗೆ ಯಾವುದೇ ಅರ್ಥವಿಲ್ಲ: ಸಚಿವ ಮಾಧುಸ್ವಾಮಿ

ಜನರ ಆಕ್ರೋಶ ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಬೆಳಗಾವಿ ಬದಲು ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂಬ ಕಾಂಗ್ರೆಸ್ ಟೀಕೆ ವಿರುದ್ಧ ಕಾನೂನು ಸಚಿವ ಮಾಧುಸ್ವಾಮಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಕಾನೂನು ಸಚಿವ ಮಾಧುಸ್ವಾಮಿ
ಕಾನೂನು ಸಚಿವ ಮಾಧುಸ್ವಾಮಿ
Updated on: 

ಬೆಂಗಳೂರು: ಜನರ ಆಕ್ರೋಶ ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಬೆಳಗಾವಿ ಬದಲು ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂಬ ಕಾಂಗ್ರೆಸ್ ಟೀಕೆ ವಿರುದ್ಧ ಕಾನೂನು ಸಚಿವ ಮಾಧುಸ್ವಾಮಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ನಮಗೆ ಯಾವುದೇ ಭಯವಿಲ್ಲ. ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ, ಕಾಂಗ್ರೆಸ್ ನಾಯಕರು ಜನರನ್ನು ಸುವರ್ಣಸೌಧಕ್ಕೆ ಕರೆದುಕೊಂಡು ಬರುತ್ತಾರೆ. ಅಲ್ಲಿ ಹೇಳುವ ವಿಷಯವನ್ನು ಶಾಸಕರು ಬೆಂಗಳೂರಿನಲ್ಲಿಯೇ ಹೇಳಲಿ, ಅಲ್ಲಿ ಕುಳಿತುಕೊಳ್ಳುವ ಶಾಸಕರೇ ಇಲ್ಲಿಯೂ ಕುಳಿತುಕೊಳ್ಳುತ್ತಾರೆ. ಈ ಕುರಿತ ಕಾಂಗ್ರೆಸ್ ಟೀಕೆಗೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ. 

ಪ್ರವಾಹದಿಂದ ಜಿಲ್ಲೆಯ ಬಹುತೇಕ ಕಡೆ ಜನರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಪರಿಹಾರ ನೀಡುವ, ಮೂಲಭೂತ ವ್ಯವಸ್ಥೆ ಸರಿಪಡಿಸುವ ಕೆಲಸದಲ್ಲಿ ಜಿಲ್ಲಾಡಳಿತ ತೊಡಗಿದೆ. ಹೀಗಿರುವಾಗ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಪರಿಹಾರ ಕಾರ್ಯಕ್ಕೆ ತೊಂದರೆಯಾಗಬಹುದೆಂದು ಜಿಲ್ಲಾಡಳಿತ ಅಭಿಪ್ರಾಯಪಟ್ಟ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ಬಾರಿಯ ಅಧಿವೇಶನದಲ್ಲಿ ಬಜೆಟ್'ಗೆ ಅನುಮೋದನೆ ಪಡೆಯುವ ಜೊತೆಗೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಪರಿಹಾರ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಪೂರಕ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com