ವಿದ್ಯಾರ್ಥಿಗಳು ಹಣ ಸಂಗ್ರಹಿಸಿ  ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿ: ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ  ಸುಮಾರು 60 ಸಾವಿರ ಕೋಟಿ ರು ನಷ್ಟವಾಗಿದ್ದು,  ನೆರೆ ಪರಿಹಾರ ಕಾರ್ಯಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ...
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ  ಸುಮಾರು 60 ಸಾವಿರ ಕೋಟಿ ರು ನಷ್ಟವಾಗಿದ್ದು,  ನೆರೆ ಪರಿಹಾರ ಕಾರ್ಯಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಕರ್ನಾಟಕ ಉನ್ನತ ಶಿಕ್ಷಣ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 150 ವರ್ಷಗಳಲ್ಲಿ ಇಂಥ ಭೀಕರ ಪ್ರವಾಹ ನೋಡಿರಲಿಲ್ಲ, ಹೀಗಾಗಿ ನೆರೆ ಪರಿಹಾರ ಕಾರ್ಯಕ್ಕೆ ವಿದ್ಮಾರ್ಥಿಗಳು ಕೈ ಜೋಡಿಸಬೇಕು ಎಂದು ಹೇಳಿದ್ದಾರೆ.

ಎನ್ ಎಸ್ ಎಸ್ ವಿದ್ಯಾರ್ಥಿಗಳು ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕೆಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಆರ್ಥಿಕವಾಗಿ ನೆರವು ನೀಡುವಂತೆ  ಡಿಸಿಎಂ . ಕೋರಿದ್ದಾರೆ. ವಿದ್ಯಾರ್ಥಿಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಚಿಂತಿಸುವಂತೆ ಉಪಕುಲಪತಿಗಳಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com