
ಬೆಂಗಳೂರು: ಸುಮಾರು ಎರಡು ದಶಕಗಳ ಹಿಂದಿನ ಡಿನೊಟಿಫಿಕೇಷನ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮೂಡಾ) ಡಿನೋಟಿಫಿಕೇಷನ್ ಸಂಬಂಧಿಸಿದ ವಿಚಾರಣೆಗೆ ಸೆ. 26ರಂದು ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿದ್ದ ಬಿ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ರದ್ದುಗೊಳಿಸಿದ್ದು, ವಿಚಾರಣೆಗೆ ಸಮನ್ಸ್ ಜಾರಿ ಮಾಡಿದೆ.
Advertisement