ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಪ್ರವಾಹ ಪರಿಹಾರಕ್ಕೆ ಕೇಂದ್ರದ ಹಣಕಾಸಿನ ನೆರವಿನ ಅಗತ್ಯವಿಲ್ಲ: ತೇಜಸ್ವಿ ಸೂರ್ಯ

14ನೇ ಹಣಕಾಸು ಆಯೋಗದ ಶಿಪಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಿದೆ ಆದುದರಿಂದ ನರೆ ಸಂತ್ರಸ್ಥರ ಪುನರ್ವಸತಿಗೆ ರಾಜ್ಯ ಸರ್ಕಾರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವ ಅವಶ್ಯಕತೆಯಿದೆ,

ಬೆಳಗಾವಿ:  14ನೇ ಹಣಕಾಸು ಆಯೋಗದ ಶಿಪಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಿದೆ ಆದುದರಿಂದ ನರೆ ಸಂತ್ರಸ್ಥರ ಪುನರ್ವಸತಿಗೆ ರಾಜ್ಯ ಸರ್ಕಾರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಜ್ಯಗಳಿಗೆ ಹೆಚ್ಚಿನ ಅನುದಾನ ಸಿಗುಂತೆ ಮಾಡಿದ್ದಾರೆ. ಅತಿವೃಷ್ಟಿಯಾದ ಸಂದರ್ಭದಲ್ಲಿ ರಾಜ್ಯಗಳು ಕೇಂದ್ರದ ಕದ ತಟ್ಟದಿರಲೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯ ಸರ್ಕಾರ ಆರ್ಥಿಕ ಸದೃಡವಾಗಿದೆ. ಆದುದರಿಂದ ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರದಿಂದಲೇ ಸಿಎಂ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಈ ವಯಸ್ಸಿನಲ್ಲೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ವಿರೋಧ ಪಕ್ಷಗಳ ಆರೋಪ ಅರ್ಥಹೀನ ಎಂದು ಹೇಳಿದರು.

ನರೆ ಸಂತ್ರಸ್ಥರ ರಕ್ಷಣೆಗೆ ಬಂದಿದ್ದ ಎನ್​​ಡಿಆರ್​​ಎಫ್​ತಂಡ ಹಾಗೂ ಸೇನೆ ಕೇಂದ್ರ ಸರ್ಕಾರದ ಅಧೀನದಲ್ಲಿರುವಂತಹದ್ದು, ವೈಮಾನಿಕ ಸಮೀಕ್ಷೆ ನಡೆಸಿದ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದ ಪ್ರತಿನಿಧಿಗಳಾಗಿ ಬಂದಿದ್ದರು ಎಂದು ತಿಳಿಸಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com