ನೆರೆ ಸಂತ್ರಸ್ತರ ಸಂಕಷ್ಟ ನಿವಾರಣೆಗೆ ಕೇಂದ್ರ, ರಾಜ್ಯ ಸರ್ಕಾರ ಬದ್ಧ: ಕೇಂದ್ರ ಸಚಿವ.ಸದಾನಂದ ಗೌಡ

ನೆರೆ ಸಂತ್ರಸ್ತರ ಸಂರಕ್ಷಣೆ ಮಾಡುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಸರಕಾರದ್ದು. ಈ ಜವಾಬ್ದಾರಿಯನ್ನು ಎರಡೂ ಸರ್ಕಾರಗಳು ಸಮರ್ಪಕವಾಗಿ ನಿಭಾಯಿಸುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ‌.ಸದಾನಂದ ಗೌಡ ಹೇಳಿದ್ದಾರೆ.
ಸದಾನಂದ ಗೌಡ
ಸದಾನಂದ ಗೌಡ
Updated on: 

ಮಂಗಳೂರು: ನೆರೆ ಸಂತ್ರಸ್ತರ ಸಂರಕ್ಷಣೆ ಮಾಡುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಸರಕಾರದ್ದು. ಈ ಜವಾಬ್ದಾರಿಯನ್ನು ಎರಡೂ ಸರ್ಕಾರಗಳು ಸಮರ್ಪಕವಾಗಿ ನಿಭಾಯಿಸುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ‌.ಸದಾನಂದ ಗೌಡ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ‌ ನರೇಂದ್ರ ಮೋದಿ "ಹೌಡಿ ಮೋದಿ" ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ನಮ್ಮ ದೇಶದ ಹಿರಿಮೆ ಜಗತ್ತಿನಾದ್ಯಂತ ಪಸರಿಸಲಿದೆ ಎಂದರು.

ಅಮೆರಿಕ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಂಡು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅನಿವಾಸಿ ಭಾರತೀಯರಾದ ಇಂಜಿನಿಯರ್‌ಗಳು, ವೈದ್ಯರು, ಉದ್ಯಮಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ನಮ್ಮ ದೇಶದ ಹಿರಿಮೆ ಇತರ ದೇಶಗಳು ಕೊಂಡಾಡುವಂತಾರಾಗುವಲ್ಲಿ ಈ ‌ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com