
ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಅಕ್ಟೋಬರ್ 10-12ರ ವರೆಗೆ ಮೂರು ದಿನಗಳಿಗೆ ಮೊಟಕುಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಈಕಳೆದ ಸಚಿ ವ ಸಂಪುಟ ಸಭೇಯಲ್ಲಿ ವಿಧಾನ ಮಂಡಲಗಳ ಅಧಿವೇಶನವನ್ನು ಅಕ್ಟೋಬರ್ 14 ರಿಂದ 26 ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಅಧಿವೇಶನವನ್ನು ಅಕ್ಟೋಬರ್ 10ರಿಂದ 12ರ ವೆರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಈ ಅಧಿವೇಶನದಲ್ಲಿ ಹಣಕಾಸು ಮಸೂದೆ ಬಿಟ್ಟು ಬೇರೆ ಯಾವುದೇ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ.ಜತೆಗೆ ಪೂರಕ ಅಂದಾಜಿಗೂ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
Advertisement