ಸಿಲಿಕಾನ್ ಸಿಟಿಯಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ-'ಯೆಲ್ಲೋ ಅಲರ್ಟ್' ಘೋಷಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು, ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು "ಯೆಲ್ಲೋ ಅಲರ್ಟ್" ಘೋಷಣೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು, ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು "ಯೆಲ್ಲೋ ಅಲರ್ಟ್" ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುಂದಿನ ಎಪ್ಪತ್ತೆರಡು ಗಂಟೆಗಳ ಕಾಲ ಬೆಂಗಳೂರಿನಾದ್ಯಂತ ಭಾರೀ ಮಳೆಯಾಗಲಿದೆ ಎಂದಿದ್ದು ದಿನನಿತ್ಯ 7 ರಿಂದ 11 ಸೆಂಟಿಮೀಟರ್‌ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com