ಪ್ರತಿಭಟನೆ ಚಿತ್ರ
ರಾಜ್ಯ
'ಸುಪ್ರೀಂ' ಮುಖ್ಯ ನ್ಯಾಯಮೂರ್ತಿಯಿಂದ ಭರವಸೆ; ಪ್ರತಿಭಟನೆ ಅಂತ್ಯಗೊಳಿಸಿದ ಎನ್ಎಲ್ಎಸ್ಐಯು ವಿದ್ಯಾರ್ಥಿಗಳು
ರಾಷ್ಟ್ರೀಯ ಕಾನೂನು ಶಾಲೆ ಭಾರತೀಯ ವಿಶ್ವವಿದ್ಯಾಲಯ(ಎನ್ಎಲ್ಎಸ್ಐಯು) ವಿದ್ಯಾರ್ಥಿಗಳು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ.
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆ ಭಾರತೀಯ ವಿಶ್ವವಿದ್ಯಾಲಯ(ಎನ್ಎಲ್ಎಸ್ಐಯು) ವಿದ್ಯಾರ್ಥಿಗಳು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ.
ಕುಲಪತಿ ನೇಮಕ ಸಂಬಂಧ ನ್ಯಾಯಮೂರಂತಿ ಶರದ್ ಅರವಿಂದ್ ಬೊಬ್ಡೆ ಅವರ ನೇತೃತ್ವದ ಕಾರ್ಯಕಾರಿ ಮಂಡಳಿಯ ವರದಿಯಂತೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ. ಇನ್ನು ಮಂಗಳವಾರ ಎಂದಿನಂತೆ ತರಗತಿಗೆ ಹಾಜರಾಗಲು ಮತ್ತು ಪರೀಕ್ಷೆಗಳನ್ನು ಬರೆಯಲು ತೀರ್ಮಾನಿಸಿದ್ದಾರೆ.
ಎರಡು ತಿಂಗಳಿನಿಂದ ಖಾಲಿಯಿರುವ ಕುಲಪತಿ ಹುದ್ದೆಯನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಎನ್ಎಲ್ಎಸ್ಐನ ಸ್ಟೂಡೆಂಟ್ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಹಾಗೂ ಪರೀಕ್ಷೆಯನ್ನು ಬಹಿಷ್ಕರಿಸಿ ಧರಣಿ ನಡೆಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ