ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜೈಲಾ...? ಬೇಲಾ...?: ಇಡಿ ವಿಶೇಷ ನ್ಯಾಯಾಲಯದಲ್ಲಿ ಇಂದು ಡಿಕೆಶಿ ಜಾಮೀನು ಭವಿಷ್ಯ!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಡಿಕೆಶಿಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ನಿರ್ಧಾರವಾಗಲಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಡಿಕೆಶಿಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ನಿರ್ಧಾರವಾಗಲಿದೆ.

ಜಾರಿ ನಿರ್ದೇಶನಾಲಯ (ಇ.ಡಿ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಬುಧವಾರ ಜಾಮೀನು ಅರ್ಜಿಯ ಅಂತಿಮ ವಿಚಾರಣೆ ನಡೆಸಲಿದ್ದು, ಇಂದೇ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ. 

ಈ ಹಿಂದಿನ ವಿಚಾರಣೆಯಲ್ಲಿ ಇ.ಡಿ ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿರುವ ಡಿಕೆಶಿ ಪರ ವಕೀಲರು, ಜಾಮೀನು ನೀಡಬೇಕು ಎಂದು ವಾದಿಸಿದ್ದರು. ಆದರೆ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಈ ಸನ್ನಿವೇಶದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆಯಿದೆ ಎಂದು ಇಡಿ ವಕೀಲರು ವಾದಿಸಿದ್ದರು. 

ಡಿಕೆಶಿಗೆ ಜಾಮೀನು ಸಿಗದಲ್ಲಿ ಅ.1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದ್ದು, ಅದೇ ದಿನದಂದು ಮತ್ತೆ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎನ್ನಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com