ಬಸ್‍ನಲ್ಲಿಯೇ ಪ್ರೇಮಿಗಳ ಸರಸ ಸಲ್ಲಾಪ, ಯುವ ಜೋಡಿಯ ಕಿಸ್ಸಿಂಗ್ ವಿಡಿಯೋ ವೈರಲ್

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಯುವ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿ, ಸರಸ ಸಲ್ಲಾಪದಲ್ಲಿ ತೊಡಗಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯುವ ಜೋಡಿ
ಯುವ ಜೋಡಿ
Updated on

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಯುವ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿ, ಸರಸ ಸಲ್ಲಾಪದಲ್ಲಿ ತೊಡಗಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳಿಬ್ಬರು ಪರಸ್ಪರ ಕಿಸ್ ಮಾಡುವ ವಿಡಿಯೋ ವೈರಲ್ ಆಗಿದೆ. ಪ್ರೇಮಿಗಳು ಬಸ್‍ನಲ್ಲಿ ಅಕ್ಕ-ಪಕ್ಕ ಕುಳಿತು ಒಬ್ಬರಿಗೊಬ್ಬರು ತಬ್ಬಿಕೊಂಡು ಚುಂಬನ ನೀಡುತ್ತಾ ಮೈ ಮರೆತಿದ್ದಾರೆ. ಜೋಡಿ ಕುಳಿತಿದ್ದ ಪಕ್ಕದ ಸೀಟ್ ನಲ್ಲಿ ಕುಳಿತಿದ್ದ ಸಹ ಪ್ರಯಾಣಿಕರೊಬ್ಬರು ಪ್ರೇಮಿಗಳು ವರ್ತನೆಯನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದುಕೊಂಡಿದ್ದಾರೆ.

ಈ ಜೋಡಿ ಯಾರು ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ಆದರೆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕವಾಗಿ ಈ ರೀತಿ ಅಸಭ್ಯವಾಗಿ ವರ್ತಿಸಿದರೆ ಸಹ ಪ್ರಯಾಣಿಕರು ಮುಜುಗರಕೊಳ್ಳಗಾಗುತ್ತಾರೆ. ಬಸ್ ನಲ್ಲಿ ಮಕ್ಕಳು ಸಹ ಪ್ರಯಾಣ ಮಾಡುತ್ತಿರುತ್ತಾರೆ. ಇಂತಹ ಘಟನೆಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com