ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮುಲು

ಅಪಘಾತವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಮಾನವೀಯತೆ ಮೆರೆದಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರೋಗ್ಯ ಸಚಿವರು ಶ್ರೀರಾಮುಲು
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರೋಗ್ಯ ಸಚಿವರು ಶ್ರೀರಾಮುಲು
Updated on

ಉಡುಪಿ: ಅಪಘಾತವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಮಾನವೀಯತೆ ಮೆರೆದಿದ್ದಾರೆ.

ಸಚಿವರು ಶನಿವಾರ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿ ಆಟೋ ರಿಕ್ಷಾ ಒಂದು ಮಗುಚಿ ಬಿದ್ದಿತ್ತು.

ಡಿವೈಡರ್ ಹೊಡೆತಕ್ಕೆ ರಿಕ್ಷಾದಲ್ಲಿದ್ದ ಮೂವರಿಗೆ ಗಾಯಗಳಾಗಿದ್ದವು. ಈ ದೃಶ್ಯವನ್ನು ಗಮನಿಸಿದ ತಕ್ಷಣ ಸಚಿವ ಶ್ರೀರಾಮುಲು, ಶಾಸಕ ರಘುಪತಿ ಭಟ್, ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನ ಪಡಿಸಿದರು. ನಂತರ ಸಚಿವರೇ ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ತಾವೇ ಎತ್ತಿ ಗಾಯಾಳುಗಳನ್ನು ಕಾರಿನಲ್ಲಿ ಕೂರಿಸಿ, ಆಸ್ಪತ್ರೆಗೆ ದಾಖಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com