338 ಕೋಟಿ ರೂ. ಆಸ್ತಿ ಘೋಷಣೆ, ಡಿಕೆಶಿ ಸಹೋದರ ಡಿಕೆ ಸುರೇಶ್ ಗೆ ಇ.ಡಿ. ಸಮನ್ಸ್ ಜಾರಿ

ಅಕ್ರಮ ಹಣ ವರ್ಗಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಏತನ್ಮಧ್ಯೆ ಸಹೋದರ, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 
ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್
ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್
Updated on: 

ನವದೆಹಲಿ: ಅಕ್ರಮ ಹಣ ವರ್ಗಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಏತನ್ಮಧ್ಯೆ ಸಹೋದರ, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 

ಈಗಾಗಲೇ ವಿಚಾರಣೆಗೆ ಎಂದು ತೆರಳಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮೊದಲು ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಹಾಗೂ ಶಿವಕುಮಾರ್ ಪುತ್ರಿ ಐಶ್ವರ್ಯ ಸೇರಿದಂತೆ ಹಲವರನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದೀಗ ಸೋದರ ಡಿ.ಕೆ.ಸುರೇಶ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ.

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾಗೆ ಸಾಲ ನೀಡಿರುವುದು ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 338 ಕೋಟಿ ರೂಪಾಯಿ ಆಸ್ತಿ ಇದ್ದಿರುವುದಾಗಿ ಡಿಕೆ ಸುರೇಶ್ ಘೋಷಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಇ.ಡಿ ಸಮನ್ಸ್ ಜಾರಿ ಮಾಡಿದೆ. ತಂದೆ ಕೆಂಪೇಗೌಡರ ಹೆಸರಿನಲ್ಲಿದ್ದ ಎಲ್ಲಾ ಆಸ್ತಿ ಡಿಕೆ ಸುರೇಶ್ ಹೆಸರಿಗೆ ವರ್ಗಾವಣೆ ಆಗಿರುವ ಬಗ್ಗೆಯೂ ವಿಚಾರಣೆ ನಡೆಯಬೇಕಾಗಿದೆ ಎಂದು ಇ.ಡಿ ತಿಳಿಸಿರುವುದಾಗಿ ವರದಿ ಹೇಳಿದೆ.ಸಮನ್ಸ್ ಹಿನ್ನೆಲೆಯಲ್ಲಿ ಡಿ.ಕೆ.ಸುರೇಶ್ ಇಡಿ ಅಧಿಕಾರಿಗಳ ಮುಂದೆ ಮಂಗಳವಾರ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com