ಸಾಂದರ್ಭಿಕ ಚಿತ್ರ
ರಾಜ್ಯ
ಪೊಲಿಯೊ ಲಸಿಕೆ ಕೊರತೆಯನ್ನು ಶೀಘ್ರವೇ ಬಗೆಹರಿಸಲಾಗುವುದು:ಸಚಿವ ಶ್ರೀರಾಮುಲು ಭರವಸೆ
ರಾಜ್ಯದ ಹಲವು ಆರೋಗ್ಯ ಕೇಂದ್ರಗಳಲ್ಲಿ ಇಂಜೆಕ್ಟಾಬಲ್ ಇನಕ್ಟಿವಾಟೆಡ್ ಪೋಲಿಯೊ ವ್ಯಾಕ್ಸೀನ್(ಐಪಿವಿ) ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಬಂದ ನಂತರ ಆರೋಗ್ಯ ಸಚಿವ ಬಿ ಶ್ರೀರಾಮುಲು ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಹೇಳಿದ್ದಾರೆ.
ಮಂಗಳೂರು: ರಾಜ್ಯದ ಹಲವು ಆರೋಗ್ಯ ಕೇಂದ್ರಗಳಲ್ಲಿ ಪೊಲಿಯೊ ಲಸಿಕೆ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಬಂದ ನಂತರ ಆರೋಗ್ಯ ಸಚಿವ ಬಿ ಶ್ರೀರಾಮುಲು ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಹೇಳಿದ್ದಾರೆ.
ಪೋಲಿಯೋ ಲಸಿಕೆಗೆ ಕೊರತೆಯಿರುವುದು ತಮ್ಮ ಗಮನಕ್ಕೆ ಬಂದಿರಲಿಲ್ಲ, ಇಲಾಖೆಯ ಅಧಿಕಾರಿಗಳು ಸಹ ತಮ್ಮ ಗಮನಕ್ಕೆ ತಂದಿರಲಿಲ್ಲ, ಈ ಬಗ್ಗೆ ಕೂಡಲೇ ಗಮನ ಹರಿಸುತ್ತೇನೆ ಎಂದು ಹೇಳಿದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅನೇಕ ತಿಂಗಳುಗಳಿಂದ ಪೋಲಿಯೊ ಲಸಿಕೆ ಪೂರೈಕೆಯಾಗುತ್ತಿಲ್ಲ. ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಅನೇಕರು ಪೊಲಿಯೊ ಲಸಿಕೆ ಸಿಗುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಎಲ್ಲೆಲ್ಲಾ ಲಸಿಕೆ ಕೊರತೆಯಿದೆ ಅಲ್ಲಿನ ಸಮಸ್ಯೆಗಳನ್ನು ಮೊದಲು ಬಗೆಹರಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದರು.

