ಬೆಂಗಳೂರಿನಲ್ಲಿ ಸಿಬಿಐ ದಾಳಿ, 14 ಲಕ್ಷ ರು. ಲಂಚ ಸ್ವೀಕರಿಸುತ್ತಿದ್ದ ಐಟಿ ಅಧಿಕಾರಿ ಬಂಧನ

ಇಷ್ಟು ದಿನ ರಾಜಕಾರಣಿಗಳು, ನಟರು ಹಾಗೂ ಗುತ್ತಿಗೆದಾರರಿಗೆ ಶಾಕ್ ನೀಡುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗೇ ಬುಧವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಇಷ್ಟು ದಿನ ರಾಜಕಾರಣಿಗಳು, ನಟರು ಹಾಗೂ ಗುತ್ತಿಗೆದಾರರಿಗೆ ಶಾಕ್ ನೀಡುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗೇ ಬುಧವಾರ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು, 14 ಲಕ್ಷ ರುಪಾಯಿ ಲಂಚ ಪಡೆಯುತ್ತಿದ್ದ ಐಟಿ ಅಧಿಕಾರಿಯನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.
ಇಂದು ಜಯನಗರದ ಕೆಫೆ ಕಾಫಿ ಡೇ ನಲ್ಲಿ ಗುತ್ತಿಗೆದಾರಿಂದ 14 ಲಕ್ಷ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ಐಟಿ ಅಧಿಕಾರಿ ನಾಗೇಶ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಹಣವನ್ನೂ ಜಪ್ತಿ ಮಾಡಿದ್ದಾರೆ.
ಕಳೆದ ಮಾರ್ಚ್ ನಲ್ಲಿ ಗುತ್ತಿಗೆದಾರ ಶ್ರೀನಿವಾಸ್​ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಐಟಿ ಅಧಿಕಾರಿ ನಾಗೇಶ್ ಅವರು ಕೇಸ್ ಖುಲಾಸೆಗೊಳಿಸಲು 40 ಲಕ್ಷ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಅದರಂತೆ ಇಂದು 14 ಲಕ್ಷ ರುಪಾಯಿ ನಗದು ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟ ಕುರಿತು ಗುತ್ತಿಗೆದಾರ ಶ್ರೀನಿವಾಸ್ ಸ್ನೇಹಿತನ ಸಲಹೆ ಮೇರೆಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಅನ್ವಯ ಸ್ಥಳಕ್ಕೆ ಬಂದ ಸಿಬಿಐ ಅಧಿಕಾರಿಗಳು ಹಣ ಪಡೆಯುವ ವೇಳೆಯೇ ನಾಗೇಶ್ ರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com