ಬೆಂಗಳೂರು: ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ 8 ಬಾಲಕಿಯರ ರಕ್ಷಣೆ

ಕೆಂಗೇರಿಯಲ್ಲಿ ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ ಕನಿಷ್ಠ 8 ಮಂದಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆಂಗೇರಿಯಲ್ಲಿ ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ ಕನಿಷ್ಠ 8 ಮಂದಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ.
ಆಶ್ರಮದ ಮಾಲೀಕ 40 ವರ್ಷದ ಜಾದೂಗಾರ ಆಗಿದ್ದು ಆತ ಆಶ್ರಮದಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪೊಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣವರ್, ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ನಾವು ಕೇಸು ದಾಖಲಿಸಿದ್ದೇವೆ. ತನಿಖೆ ಮುಂದುವರಿಸಿದ್ದೇವೆ. ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿಯವರಿಗೆ ಕೇಸಿನ ತನಿಖೆ ವಹಿಸಿದ್ದೇವೆ ಎಂದರು.
ಆಶ್ರಮದಿಂದ ತಪ್ಪಿಸಿಕೊಂಡು ಬಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ ಬಾಲಕಿಯೊಬ್ಬಳು ನೀಡಿದ ಮಾಹಿತಿ ಪಡೆದ ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯರು ನೀಡಿದ್ದ ದೂರಿನ ಮೇರೆಗೆ ನಗರ ಪೊಲೀಸರು ಆಶ್ರಮಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ.
ಈ ಬಾಲಕಿ ಮಾತ್ರ ದೂರು ಸಲ್ಲಿಸಿದ್ದು ಬೇರೆ ಬಾಲಕಿಯವರು ಯಾವುದೇ ದೂರು ನೀಡಿಲ್ಲ, ಹೀಗಾಗಿ ತನಿಖೆ ನಡೆಸಿಯೇ ನಾವು ತೀರ್ಮಾನಕ್ಕೆ ಬರುತ್ತೇವೆ ಎನ್ನುತ್ತಾರೆ ಹಿರಿಯ ಪೊಲೀಸ್ ಅಧಿಕಾರಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com