ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ, ದೂರು ದಾಖಲು

ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ನಗರ ಬಿಜೆಪಿ ಶಾಸಕ ಕೆ.ಎಚ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತಂತೆ ಅವರು ಶಿವಮೊಗ್ಗ ಜಿಲ್ಲಾ ಪೋಲೀಸ್ ವರಿಷ್ಠರಲ್ಲಿ ದೂರು ದಾಖಲಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ನಗರ ಬಿಜೆಪಿ ಶಾಸಕ ಕೆ.ಎಚ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತಂತೆ ಅವರು ಶಿವಮೊಗ್ಗ ಜಿಲ್ಲಾ ಪೋಲೀಸ್ ವರಿಷ್ಠರಲ್ಲಿ ದೂರು ದಾಖಲಿಸಿದ್ದಾರೆ.
ಶನಿವಾರ ರಾತ್ರಿ ಈಶ್ವರಪ್ಪ ಬೆಂಗಲೂರಿನಿಂದ ಶಿವಮೊಗ್ಗಕ್ಕೆ ಹಿಂತಿರುಗುವ ವೇಳೆ ಅನಾಮಧೇಯ ವ್ಯಕ್ತಿ ಕರೆಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾನೆ.
ಉರ್ದು ಮಿಶ್ರಿತ ಕನ್ನಡದಲ್ಲಿ ಮಾತನಾಡಿದ ಆತ "ಬಿಜೆಪಿ ಸಂಸದ ಸ್ಥಾನಗಳಿಗೆ ಏಕೆ ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲ? ನಿಮಗೆ ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು" ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಈಶ್ವರಪ್ಪ ಹೇಳಿದರು.
ಅನಾಮಧೇಯ ವ್ಯಕ್ತಿ ಈಶ್ವರಪ್ಪ ಮೊಬೈಲ್ ಗೆ ಎರಡು ಬಾರಿ ಕರೆ ಮಾಡಿದ್ದ. ಅವಾಚ್ಯ ಶಬ್ದಗಳಿಂದ ಬೈದಿದ್ದ ಆವ್ಯಕ್ತಿಗೆ ಶಾಸಕ ಈಶ್ವರಪ್ಪ ಅವರೂ ಸಹ ಬೈಯ್ದಿದ್ದಾರೆ. ಆಗ ವ್ಯಕ್ತಿ ಕರೆಯನ್ನು ಕಟ್ ಮಾಡಿದ್ದಾನೆ.
ಅನಾಮಧೇಯ ಕರೆ ಹಿನ್ನೆಲೆಯಲ್ಲಿ ದೂರು ಸಲ್ಲಿಸಿರುವ ಈಶ್ವರಪ್ಪ "ಈ ಸಂಬಂಧ ಸೂಕ್ತ ತನಿಖೆ ಆಗಬೇಕು.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಜೀವ ಬೆದರಿಕೆ ಹಿನ್ನೆಲೆ ನನಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ದೂರಿನಲ್ಲಿ ವಿವರಿಇಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಈಶ್ವರಪ್ಪ"ರಾಜ್ಯದಲ್ಲಿ ಸಂಸದೀಅ ಚುನಾವಣೆಗೆ ಬಿಜೆಪಿಯಿಂದ ಮುಸ್ಲಿಮರಿಗೆ ಟಿಕೆಟ್ ಕೊಡಲ್ಲ ಏಕೆಂದರೆ ಅವರಿಗೆ ನಮ್ಮ ಪಕ್ಷದ ಬಗ್ಗೆ ವಿಶ್ವಾಸವಿಲ್ಲ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈಗ ಇದೇ ಕಾರಣಕ್ಕೆ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ಸಂಶಯ ವ್ಯಕ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com