ಸಿಎಂ ಕುಮಾರಸ್ವಾಮಿ, ಇತರರ ವಿರುದ್ಧ ಐಟಿ ಇಲಾಖೆ ದೂರು: ಎಸಿಪಿಯಿಂದ ತನಿಖೆ

ಇತ್ತೀಚಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಪುಟದ ಸಚಿವರ...
ಐ.ಟಿ ಇಲಾಖೆ ಎಂದುರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದ ಸಮ್ಮಿಶ್ರ ಸರ್ಕಾರದ ಪ್ರತಿನಿಧಿಗಳು(ಸಂಗ್ರಹ ಚಿತ್ರ)
ಐ.ಟಿ ಇಲಾಖೆ ಎಂದುರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದ ಸಮ್ಮಿಶ್ರ ಸರ್ಕಾರದ ಪ್ರತಿನಿಧಿಗಳು(ಸಂಗ್ರಹ ಚಿತ್ರ)
ಬೆಂಗಳೂರು: ಇತ್ತೀಚಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಪುಟದ ಸಚಿವರ ವಿರುದ್ಧ ಐಟಿ ಇಲಾಖೆ ದೂರು ದಾಖಲಿಸಿದ್ದು, ಪ್ರಕರಣದ ತನಿಖೆಗೆ ಎಸಿಪಿಯೊಬ್ಬರನ್ನು ನಿಯೋಜಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಚುನಾವಣ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೆ ಕಚೇರಿ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿರುವುದು ಕಾನೂನುಬಾಹಿರ ಮತ್ತು ಪ್ರತಿಭಟನೆ ನಡೆಸುವ ಮೂಲಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಗೋವಾ ಮತ್ತು ಕರ್ನಾಟಕ ವಿಭಾಗದ ಆದಾಯ ತೆರಿಗೆ ಪ್ರಧಾನ ಆಯುಕ್ತ ಬಿ.ಆರ್‌. ಬಾಲಕೃಷ್ಣನ್‌ ಅವರು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದರು.
ಬಾಲಕೃಷ್ಣನ್ ಅವರ ದೂರು ಆಧರಿಸಿ, ಪ್ರಕರಣದ ತನಿಖೆಗೆ ಬಾಣಸವಾಡಿ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ)ರನ್ನು ನೇಮಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 28 ರಂದು ಐಟಿ ದಾಳಿ ಖಂಡಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್, ಸಚಿವ ಸಾ.ರಾ.ಮಹೇಶ್‌, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com