ದರ್ಶನ್ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿಲ್ಲ: ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ

ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ...

Published: 15th April 2019 12:00 PM  |   Last Updated: 15th April 2019 08:21 AM   |  A+A-


Income Tax department denies raids on actor Darshan's farm house near Mysuru

ದರ್ಶನ್

Posted By : LSB LSB
Source : UNI
ಬೆಂಗಳೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ವದಂತಿಯನ್ನು ಇಲಾಖೆ ಸ್ಪಷ್ಟವಾಗಿ ತಳ್ಳಿಹಾಕಿದೆ. 

ಈ ಕುರಿತು ಸ್ಪಷ್ಟನೆ ನೀಡಿರುವ ಕರ್ನಾಟಕ-ಗೋವಾ ವಲಯದ ಐಟಿ ಇಲಾಖೆ, ದರ್ಶನ್ ಮನೆಯ ಮೇಲೆ ಯಾವುದೇ ದಾಳಿ ನಡೆಸಿ ಪರಿಶೀಲನೆ ನಡೆಸಿಲ್ಲ. ಈ ಕುರಿತ ಮಾಧ್ಯಮಗಳ ವರದಿಯಲ್ಲಿ ಯಾವುದೇ ಹುರುಳಿಲ್ಲ ಎಂದಿದೆ. 

ಮೈಸೂರು ಜಿಲ್ಲೆ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್ ಫಾರ್ಮ್ ಹೌಸ್ ಮೆಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp