ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುವುದು ಭವಿಷ್ಯಕ್ಕೆ ಅಪಾಯ: ಕಲ್ಲಡ್ಕ ಪ್ರಭಾಕರ್ ಭಟ್

ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಕ್ಕೆ ಖಾರವಾಗಿ...
ಕಲ್ಲಡ್ಕ ಪ್ರಭಾಕರ್ ಭಟ್
ಕಲ್ಲಡ್ಕ ಪ್ರಭಾಕರ್ ಭಟ್
ಮಡಿಕೇರಿ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್, ಆರ್ ಎಸ್ಎಸ್ ಎಂದಿಗೂ ದೇಶದಲ್ಲಿ ವ್ಯಕ್ತಿ ಪೂಜೆಯನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಶನಿವಾರ ಸ್ಪಷ್ಟಪಡಿಸಿದ್ದಾರೆ. 
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆಗಳಲ್ಲಿ ಓರ್ವ ವ್ಯಕ್ತಿಯ ಹೆಸರಿನಿಂದ ಮತಗಳನ್ನು ಸೆಳೆಯುವುದು ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ ಮತ್ತು  ಅದು ಅಪಾಯಕಾರಿ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಐದು ವರ್ಷಗಳಲ್ಲಿ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿಗಳು ತಮ್ಮ ಸಾಧನೆಯನ್ನು ಮುಂದಿರಿಸಿಕೊಂಡು ಮತ ಕೇಳಬೇಕು ಎಂದು ಅಭಿಪ್ರಾಯಪಟ್ಟರು.
ಭಾರತೀಯ ಸೇನೆ ನಡೆಸಿದ ಸರ್ಜಿಕಲ್‍ ಸ್ಟ್ರೈಕ್ ನ ಯಶಸ್ಸಿನ ಹೆಗ್ಗಳಿಕೆಯನ್ನು ಮೋದಿ ಅವರು ಪಡೆಯುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್‍ ಕೂಡ, ಬಾಂಗ್ಲಾದೇಶ ನಿರ್ಮಾಣಕ್ಕೆ ಕಾರಣವಾದ 1971ರ ಪಾಕಿಸ್ತಾನ ಯುದ್ಧವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿತ್ತು. ಇದರಲ್ಲಿ ಹೊಸದೇನು ಇಲ್ಲ ಎಂದರು. 
ಬಾಂಗ್ಲಾದೇಶ ಯುದ್ಧದ ಗೆಲುವಿಗೆ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರನ್ನು ಗೆಲುವಿಗೆ ಕಾರಣರಾದ 'ದುರ್ಗಾದೇವಿ' ಎಂದು ಕರೆಯಲಾಗಿತ್ತು ಎಂದು ಸ್ಮರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com