ಮಂಡ್ಯ: ಹಿರಿಯ ಸಾಹಿತಿ, ಜಾನಪದ ತಜ್ಞ ಡಾ. ಜಿ. ವಿ. ದಾಸೇಗೌಡ ನಿಧನ

ಹಿರಿಯ ಸಾಹಿತಿ, ಜಾನಪದ ತಜ್ಞ ಡಾ. ಜಿ. ವಿ. ದಾಸೇಗೌಡ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಜಿ. ವಿ. ಡಿ ಎಂಬ ಕಾವ್ಯಾನಾಮದಿಂದ ಹೆಸರಾಗಿದ್ದ ಡಾ. ಜಿ. ವಿ. ದಾಸೇಗೌಡ ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಹೆಗ್ಗುರುತುಗಳನ್ನು ಮೂಡಿಸಿದ್ದರು.

Published: 21st April 2019 12:00 PM  |   Last Updated: 21st April 2019 08:58 AM   |  A+A-


DR, G.V. Dasegowda

ಡಾ. ಜಿ. ವಿ. ದಾಸೇಗೌಡ

Posted By : ABN ABN
Source : Online Desk
ಮಂಡ್ಯ : ಹಿರಿಯ ಸಾಹಿತಿ, ಜಾನಪದ ತಜ್ಞ  ಡಾ. ಜಿ. ವಿ. ದಾಸೇಗೌಡ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಜಿ. ವಿ. ಡಿ ಎಂಬ ಕಾವ್ಯಾನಾಮದಿಂದ ಹೆಸರಾಗಿದ್ದ ಡಾ. ಜಿ. ವಿ. ದಾಸೇಗೌಡ ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಹೆಗ್ಗುರುತುಗಳನ್ನು ಮೂಡಿಸಿದ್ದರು. ಅವರ ನಿಧನದಿಂದಾಗಿ  ಜಾನಪದ ಕ್ಷೇತ್ರದ ಮತ್ತೊಂದು ಕೊಂಡಿ ಕಳಚಿದಂತಾಗಿದೆ.

 ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದರು. ಮಂಡ್ಯ ನಗರದ ಗುತ್ತಲುವಿನಲ್ಲಿ ಸಂಜೆ ಮೃತರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿತು.

ಪುತ್ರಿ, ಇಬ್ಬರು ಗಂಡು ಮಕ್ಕಳು ಸೇರಿ ಅಪಾರ ಸಾಹಿತ್ಯ ಅಭಿಮಾನಿಗಳನ್ನು ಅಗಲಿರುವ ದಾಸೇಗೌಡರು, ಜಾನಪದ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ 65ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಕನ್ನಡವಷ್ಟೇ ಅಲ್ಲದೇ, ಇಂಗ್ಲೀಷ್ , ಹಿಂದಿ, ಸಂಸ್ಕೃತ, ಪ್ರಾಕೃತ ಭಾಷೆಗಳನ್ನು ಬಲ್ಲ ಅವರು, ಕನ್ನಡ ಪ್ರಾಧ್ಯಾಪಕರಾಗಿ ಮಂಡ್ಯದ ಕೆ.ಎಂ. ದೊಡ್ಡಿ, ಮಡಿಕೇರಿ, ತುಮಕೂರು, ಮಂಡ್ಯ, ಸರ್ಕಾರಿ ಕಾಲೇಜುಗಳಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಅಂತಾರಾಷ್ಟ್ರೀಯ ಜಾನಪದ ಶಿಬಿರಗಳು, ವಿಚಾರ ಸಂಕಿರಣಗಳಲ್ಲಿ ಪ್ರೌಢ ಪ್ರಬಂಧಗಳನ್ನು ಮಂಡಿಸಿದ್ದಾರೆ.  ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಡಾ. ಜಿ. ವಿ. ಡಿ ಅವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಜಾನಪದ ಅಕಾಡೆಮಿ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಗೌರವಿಸಿ ಸನ್ಮಾನಿಸಿವೆ.

ಡಾ. ಜಿ. ವಿ. ದಾಸೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp