ಪತ್ನಿ, ಮೂವರು ಮಕ್ಕಳ ಭೀಕರವಾಗಿ ಕೊಂದು ಪರಾರಿಯಾಗಿದ್ದ ಟೆಕ್ಕಿ ಬಂಧನ

ಪತ್ನಿ ಹಾಗೂ ಮೂವರು ಮಕ್ಕಳನ್ನು ಕೊಂದ ತಲೆಮರೆಸಿಕೊಂಡಿದ್ದ ಟೆಕ್ಕಿ ಸುಮಿತ್ ಕುಮಾರ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಗಾಜಿಯಾಬಾದ್: ಪತ್ನಿ ಹಾಗೂ ಮೂವರು ಮಕ್ಕಳನ್ನು ಕೊಂದ ತಲೆಮರೆಸಿಕೊಂಡಿದ್ದ ಟೆಕ್ಕಿ ಸುಮಿತ್ ಕುಮಾರ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಆರೋಪಿ ಸುಮಿತ್ ಕುಮಾರ್ ತನ್ನ ಪತ್ನಿ ಆಶು ಬಾಲಾ(32), ಪುತ್ರ ಪರಮೇಶ್(5), ಅವಳಿ ಮಕ್ಕಳಾದ ಆಕೃತಿ(4) ಮತ್ತು ಆರವ್(4)ಗೆ ಪಾನೀಯದಲ್ಲಿ ನಿದ್ದೆ ಮಾತ್ರೆ ಹಾಕಿ ಕೊಟ್ಟು ಕೊಂದು ಹಾಕಿದ್ದ. ಅಂದಿನಿಂದ ತಲೆಮರೆಸಿಕೊಂಡಿದ್ದ ಸುಮಿತ್ ಕುಮಾರ್ ನನ್ನು ಇಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹತ್ಯೆ ಬಳಿಕ ತಾನೇ ಕೊಂದಿರುವುದಾಗಿ ಹೇಳಿದ್ದ ಸುಮಿತ್ ಈ ವಿಡಿಯೋವನ್ನು ವಾಟ್ಸಪ್ ನಲ್ಲಿ ಹರಿ ಬಿಟ್ಟಿದ್ದ. ಅಲ್ಲದೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಷ ಖರೀದಿಸಿರುವುದಾಗಿಯೂ ವಿಡಿಯೋದಲ್ಲಿ ಹೇಳಿದ್ದ.
ಬೆಂಗಳೂರಿನಲ್ಲಿ ಕರ್ನಾಟಕ ಪೊಲೀಸರ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಉತ್ತರ ಪ್ರದೇಶ ಪೊಲೀಸರು ನಿನ್ನೆ ಉಡುಪಿ ಪೊಲೀಸರ ನೆರವಿನೊಂದಿಗೆ ಆರೋಪಿ ಟೆಕ್ಕಿ ಸುಮಿತ್ ಕುಮಾರ್ ನನ್ನು ಬಂಧಿಸಿದ್ದಾರೆ. 
ಈ ಹಿಂದೆ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಿತ್ ಕುಮಾರ್ ಜನವರಿಯಲ್ಲಿ ತನ್ನ ಕೆಲಸ ಕಳೆದುಕೊಂಡು ಹಣಕಾಸಿನ ತೊಂದರೆ ಅನುಭವಿಸಿದ್ದ ಎನ್ನಲಾಗಿದೆ. ಅಲ್ಲದೆ, ಸಾಕಷ್ಟು ಸಾಲದ ಹೊರೆಯೂ ಇತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಲ್ಲದೆ ಸುಮಿತ್ ಗೆ ಸೈನೈಡ್ ಮಾರಾಟ ಮಾಡಿದ್ದ ಮುಕೇಶ್ ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದ ಸುಮಿತ್ ಕುಮಾರ್ ಮಾದಕ ದ್ರವ್ಯಗಳ ದಾಸನಾಗಿದ್ದ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com