ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಮತ್ತೊಮ್ಮೆ ಬಂಧನ

ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಲಾಗಿದೆ...

Published: 25th April 2019 12:00 PM  |   Last Updated: 25th April 2019 08:12 AM   |  A+A-


Mahesh Vikram Hegde

ಮಹೇಶ್ ವಿಕ್ರಮ್ ಹೆಗ್ಡೆ

Posted By : SUD SUD
Source : The New Indian Express
ಮಡಿಕೇರಿ: ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಲಾಗಿದೆ. ಕುಟುಂಬದ ಸಮಾರಂಭಕ್ಕೆಂದು ಮಡಿಕೇರಿಯ ವಿರಾಜಪೇಟೆಯಲ್ಲಿರುವ ಖಾಸಗಿ ರೆಸಾರ್ಟ್ ಗೆ ಬಂದಿದ್ದ ವೇಳೆ ಮಹೇಶ್ ನನ್ನು ಬಂಧಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಗೃಹ ಸಚಿವ ಎಂ ಬಿ ಪಾಟೀಲ್ ಅವರು ನೀಡಿದ್ದ ದೂರಿನ ಮೇಲೆ ಮಹೇಶ್ ಅವರನ್ನು ಬಂಧಿಸಲಾಗಿದೆ. ಲಿಂಗಾಯತ ಧರ್ಮ ಇಬ್ಭಾಗ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯೂಸ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಪತ್ರವನ್ನು ಪ್ರಕಟಿಸಿದ್ದಾರೆ ಎಂದು ಮಹೇಶ್ ವಿಕ್ರಮ್ ವಿರುದ್ಧ ಸಚಿವ ಎಂ ಬಿ ಪಾಟೀಲ್ ಕಳೆದ ಏಪ್ರಿಲ್ 16ರಂದು ವಿಜಯಪುರದಲ್ಲಿ ಕೇಸು ದಾಖಲಿಸಿದ್ದರು. ನಿನ್ನೆಯ ಮಹೇಶ್ ಬಂಧನದಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.

ಈ ಮಧ್ಯೆ, #ಐ ಸ್ಟಾಂಡ್ ವಿತ್ ಮಹೇಶ್ ಹೆಗ್ಡೆ ಹ್ಯಾಶ್ ಟಾಗ್ ನೊಂದಿಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಸಿಟಿ ರವಿ ಮೊದಲಾದ ಬಿಜೆಪಿ ನಾಯಕರು ಮಹೇಶ್ ಹೆಗ್ಡೆಯನ್ನು ಬೆಂಬಲಿಸುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ನಕಲಿ ವಿಡಿಯೊವನ್ನು ಸೃಷ್ಟಿಸಿದ್ದಾರೆ ಎಂದು ಕಳೆದ ವರ್ಷ ಸಹ ಮಹೇಶ್ ಹೆಗ್ಡೆಯನ್ನು ಬಂಧಿಸಲಾಗಿತ್ತು.
Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp