ಏ.30ರ ನಂತರ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಏಪ್ರಿಲ್ 30 ಮತ್ತು ಮೇ 2 ರ ನಂತರ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿದ್ದು,ತಮಿಳುನಾಡು, ಕೇರಳ , ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಏಪ್ರಿಲ್ 30 ಮತ್ತು ಮೇ 2 ರ ನಂತರ ಬಂಗಾಳ ಕೊಲ್ಲಿಯಲ್ಲಿ  ಚಂಡಮಾರುತ ಉಂಟಾಗಲಿದ್ದು,ತಮಿಳುನಾಡು, ಕೇರಳ , ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಭಾಗಗಳಿಗೆ ಪ್ರವಾಸಕ್ಕೆ ತೆರಳಲು ಯೋಚಿಸಿದ್ದವರು ಮುಂಜಾಗ್ರತೆ ವಹಿಸಬೇಕಾಗಿದೆ.

ಪುದುಚೇರಿ, ಕೇರಳ, ತಮಿಳುನಾಡು, ಸಕಲೇಶಪುರ, ಚಿಕ್ಕಮಗಳೂರು, ಮಂಗಳೂರು ಮತ್ತಿತರ ಕಡಲ ತೀರ  ಪ್ರದೇಶಗಳಿಗೆ ಬೇಸಿಗೆ ಪ್ರವಾಸಕ್ಕೆ ಹೋಗುವಂತವರು ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶುಕ್ರವಾರ ಮತ್ತು ಶನಿವಾರ  ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಿನಲ್ಲಿರುವ ಭಾರತೀಯ ಹಮಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದ  ಕಾರಣದಿಂದಾಗಿ  ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ ಭಾಗಗಳಲ್ಲಿ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು, ಮೈಸೂರು  ಸೇರಿದಂತೆ ಕರಾವಳಿ ಕರ್ನಾಟಕ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದಾಗಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com