ವಿಜಯಪುರ: ಲಾರಿ-ಬೈಕ್ ಡಿಕ್ಕಿ, ಒಂದೇ ಕುಟುಂಬದ ಮೂವರು ದುರ್ಮರಣ

ಇಲ್ಲಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು....

Published: 26th April 2019 12:00 PM  |   Last Updated: 26th April 2019 07:58 AM   |  A+A-


Three from a family dead in lorry-bike collision at Vijayapura

ಸಾಂದರ್ಭಿಕ ಚಿತ್ರ

Posted By : LSB LSB
Source : UNI
ವಿಜಯಪುರ: ಇಲ್ಲಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.

ವಿಜಯಪುರ ತಾಲೂಕಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಈ ದುರ್ಘಟನೆ ಸಂಭವಿಸಿದೆ. 47 ವರ್ಷದ ಬಾಳು ಪಾಂಡ್ರೆ ಹಾಗೂ ಅವರ ಜತೆ ಕುಳಿತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp