ಮೇ 2ಕ್ಕೆ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ, ಮೇ 3ಕ್ಕೆ ಶಾಲೆಗಳಲ್ಲಿ ಪ್ರಕಟ ಸಾಧ್ಯತೆ

2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಮೇ 2ಕ್ಕೆ ನಿರೀಕ್ಷಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ವಿ. ಸುಮಂಗಲಾ
ವಿ. ಸುಮಂಗಲಾ
ಬೆಂಗಳೂರು: 2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಮೇ 2ಕ್ಕೆ ನಿರೀಕ್ಷಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಅವರು ಸೋಮವಾರ ತಿಳಿಸಿದ್ದಾರೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎಲ್ಲಾ ಪ್ರಕ್ರಿಯೆಗಳು ಜಿಟಲೀಕರಣಗೊಳ್ಳುತ್ತಿರುವುದರಿಂದ ಶೀಘ್ರವೇ ಫಲಿತಾಂಶ ಪ್ರಕಟಗೊಳ್ಳುತ್ತಿದೆ. 
ಮೇ 2ಕ್ಕೆ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಮತ್ತು ಮೇ 3ಕ್ಕೆ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಬಹುದು ಎಂದಿದ್ದಾರೆ. 
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. www.kaceb.kar.nic.in ಮತ್ತು www.karresults.nic.in ಫಲಿತಾಂಶ ಪ್ರಕಟವಾಗಲಿದೆ. ಪಾಸಾದ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸಲಾಗುವುದು. ಆಯಾ ಶಾಲೆಗಳಲ್ಲಿ ಮರುದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಸುಮಂಗಲಾ ತಿಳಿಸಿದ್ದಾರೆ. 
ಮಾರ್ಚ್​ 21 ರಿಂದ ಏಪ್ರಿಲ್​ 4 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. 2,847 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. 4,651 ವಿಕಲ ಚೇತನ‌ ಮಕ್ಕಳು ಪರೀಕ್ಷೆ ಬರೆದಿದ್ದರು. 1451 ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ ಭಾಷಾ ವಿನಾಯತಿ ನೀಡಲಾಗಿತ್ತು. 480 ಅರ್ಹ ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯ ಬರೆಯುವ ಅವಕಾಶ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com