ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಬಾಣವಾರ ಗೇಟ್ ಬಳಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ತುಮಕೂರು: ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಬಾಣವಾರ ಗೇಟ್ ಬಳಿ ಮಂಗಳರಾತ್ರಿ ನಡೆದಿದೆ.
ರಾಮೇಗೌಡ (55), ಹೇಮಾ (50) ಮೃತ ದಂಪತಿ. ಮೃತರು ಮೂಲತಃ ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದವರಾಗಿದ್ದು, ಸಿಎಸ್ ಪುರದಿಂದ ತುಮಕೂರಿನೆಡೆಗೆ ತೆರಳುತ್ತಿದ್ದ ಟೆಂಪೋ, ಎದುರಿನಿಂದ ಬರುತ್ತಿದ್ದ ಕಾರಿಗೆ ಗುದ್ದಿ ನಂತರ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಟೆಂಪೋ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com