ಬೆಂಗಳೂರು: ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ನೇಣಿಗೆ ಶರಣು

ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Published: 01st August 2019 12:00 PM  |   Last Updated: 01st August 2019 12:01 PM   |  A+A-


Newly wed bride make suicide at Bengaluru

ಬೆಂಗಳೂರು: ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ನೇಣಿಗೆ ಶರಣು

Posted By : RHN RHN
Source : Online Desk
ಬೆಂಗಳೂರು: ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಆದರ್ಶ ನಗರದಲ್ಲಿ ನಡೆದ ಘಟನೆಯಲ್ಲಿ ಪಲ್ಲವಿ (24) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೂಲತಃ ಬಂಗಾರಪೇಟೆಯವಳಾಗಿದ್ದ ಪಲ್ಲವಿ ತಿಂಗಳ ಹಿಂದೆ ನವೀನ್ ಜತೆ ವಿವಾಹವಾಗಿದ್ದಳು.ಬುಧವಾರ ಮನೆಯಲ್ಲಿ ಯಾರೂ ಇರದ ವೇಳೆ ಪಲ್ಲವಿ ತಾನು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ಸುತ್ತ ಹಲವು ಅನುಮಾನಗಳಿದ್ದು ಪಲ್ಲವಿ ಪೋಷಕರು ಪತಿಯ ಕಿರುಕುಳಕ್ಕೆ ಬೇಸತ್ತು ಮಗಳು ನೇಣು ಹಾಕಿಕೊಂಡಿರುವುದಾಗಿ ಆರೋಪಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂದು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.
Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp