ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ: ಆಗಸ್ಟ್ ಅಂತ್ಯದವರೆಗೆ ಅವಧಿ ವಿಸ್ತರಣೆ

ರಾಜ್ಯದಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ...
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಮಳೆಹಾನಿ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬಿ ಎಸ್ ಯಡಿಯೂರಪ್ಪ
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಮಳೆಹಾನಿ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಅವಧಿಯನ್ನು ವಿಸ್ತರಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಆಗಸ್ಟ್ ಅಂತ್ಯದವರೆಗೆ ಟ್ಯಾಂಕರ್ ಗಳಲ್ಲಿ ನೀರು ಪೂರೈಸಲು ಸರ್ಕಾರ ಆದೇಶ ಹೊರಡಿಸಿದೆ.
2018-19ನೇ ಸಾಲಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಮುಂಗಾರು ಹಂಗಾಮಿನಲ್ಲಿ 100 ತಾಲೂಕುಗಳನ್ನು ಹಾಗೂ ಹಿಂಗಾರು ಹಂಗಾಮಿನಲ್ಲಿ 156 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. 
ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು 90 ದಿನಗಳ ನಿರ್ಬಂಧಗಳನ್ನು ಸಡಿಸಿಲಿ ಮೇ 2019 ಅಂತ್ಯದವರೆಗೆ ವಿಸ್ತರಿಸಿ ಸೂಚನೆ ನೀಡಲಾಗಿತ್ತು. ಈಗ ಅದನ್ನು ಮತ್ತೆ ವಿಸ್ತರಿಸಿ ಆಗಸ್ಟ್ ಅಂತ್ಯದವರೆಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com