ಸಿದ್ಧಾರ್ಥ್ ಸಾವು: 20 ನಿಮಿಷದ ಪ್ರಯಾಣಕ್ಕೆ ಒಂದೂವರೆ ಗಂಟೆ ಹಿಡಿದಿದ್ದೇಕೆ? ಮಾರ್ಗ ಮಧ್ಯೆ ಏನಾಯ್ತು?

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.
ಮೂಲಗಳ ಪ್ರಕಾರ ನಾಪತ್ತೆಯಾಗುವ ದಿನ ಸಿದ್ಧಾರ್ಥ್ ಸಕಲೇಶಪುರಕ್ಕೆ ತೆರಳುವುದಾಗಿ ಹೇಳಿ ಡ್ರೈವರ್ ಜೊತೆ ಕಾರಿನಲ್ಲಿ ತೆರಳಿದ್ದರಂತೆ. ಅಂದು ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಟೋಲ್‌ಗೇಟ್‌ ದಾಟಿ ಮಂಗಳೂರಿನತ್ತ ಸಾಗಿತ್ತು.  ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ಸಿದ್ಧಾರ್ಥ ಕಾರು ಹಾದು ಹೋದ ಸಮಯಕ್ಕೂ ಮಂಗಳೂರಿನಲ್ಲಿ ನಾಪತ್ತೆಯಾದ ಸಮಯದ ಮಧ್ಯೆ ಸಾಕಷ್ಟು ವ್ಯತ್ಯಾಸ ಇರುವುದು ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಬ್ರಹ್ಮರಕೂಟ್ಲು ಟೋಲ್‌ಗೇಟ್‌ ದಾಟಿತ್ತು. ಬಳಿಕ ಚಾಲಕ ನೀಡಿದ ಮಾಹಿತಿಯಂತೆ ಕಾರು ರಾತ್ರಿ 7ರ ವೇಳೆಗೆ ಪಂಪ್‌ ವೆಲ್‌ ಮುಟ್ಟಿತ್ತು. ಆದರೆ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಪಂಪ್‌ ವೆಲ್ ಗೆ ಬರಲು 15ರಿಂದ 20 ನಿಮಿಷ ಸಮಯ ಸಾಕು. ಆದರೆ ಮಂಗಳೂರಿಗೆ ಬರಲು ಅಷ್ಟು ವಿಳಂಬ ಯಾಕೆ ಎಂಬ ಪ್ರಶ್ನೆ ಎದುರಾಗಿದೆ. ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದಾಗ ಮಾರ್ಗಮಧ್ಯೆ ಏನಾಯಿತು ಎಂಬ ಪ್ರಶ್ನೆ ಕೂಡ ಎದುರಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com