ಸಿಎಂ ಬಿಎಸ್ ಯಡಿಯೂರಪ್ಪ ಕೈಯಲ್ಲಿ ಎಸಿಬಿ ಭವಿಷ್ಯ; ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ

ಇಡೀ ದೇಶವೇ ಹೆಮ್ಮೆ ಪಡುತ್ತಿದ್ದ ಲೋಕಾಯುಕ್ತ ಸಂಸ್ಛೆಯ ಅಧಿಕಾರವನ್ನು ಮೊಟಕುಗೊಳಿಸಿ, ರಚನೆಯಾಗಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಸ್ಥಿತ್ವವೇ ಅಲುಗಾಡುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಇಡೀ ದೇಶವೇ ಹೆಮ್ಮೆ ಪಡುತ್ತಿದ್ದ ಲೋಕಾಯುಕ್ತ ಸಂಸ್ಛೆಯ ಅಧಿಕಾರವನ್ನು ಮೊಟಕುಗೊಳಿಸಿ, ರಚನೆಯಾಗಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಸ್ಥಿತ್ವವೇ ಅಲುಗಾಡುತ್ತಿದೆ.
ಹೌದು... ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದು ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಎಸಿಬಿ ರದ್ದು ಮಾಡಿ ಲೋಕಾಯುಕ್ತ ಸಂಸ್ಥೆಯನ್ನೇ ಮತ್ತಷ್ಟು ಬಲಪಡಿಸುವ ಕುರಿತು ಸರ್ಕಾರ ಗಂಭೀರ ಚಿಂತನೆಯಲ್ಲಿದೆ ಎಂದು ಹೇಳಲಾಗುತ್ತಿದೆ.
ಆ ಮೂಲಕ ಲೋಕಾಯುಕ್ತಕ್ಕೆ ನೀಡಲಾಗಿದ್ದ ಅಧಿಕಾರವನ್ನು ಕಸಿದು ಎಸಿಬಿ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಎಳ್ಳುನೀರು ಬಿಡಲು ನಿರ್ಧರಿಸಿದೆ. ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಎಸಿಬಿಯನ್ನು ಬಿಜೆಪಿ ಸರ್ಕಾರ ರದ್ದು ಮಾಡಲಿದೆ ಎನ್ನಲಾಗಿದೆ. 
ಹೀಗಾಗಿ ಸಂಪುಟ ರಚನೆ ಬಳಿಕ ನಡೆಯುವ ಮೊದಲ ಸಭೆಯಲ್ಲೇ ಎಸಿಬಿ ಭವಿಷ್ಯದ ಕುರಿತು ಸರ್ಕಾರದ ದಿಟ್ಟ ಕ್ರಮ ಕೈಗೊಳ್ಳಲಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com