ತಮಿಳುನಾಡಿಗೆ ಮತ್ತೆ 5 ದಿನ ನೀರು ಬಿಡಿ: ಕಾವೇರಿ ನಿಯಂತ್ರಣ ಸಮಿತಿ

ಕೆಆರ್'ಎಸ್ ಮತ್ತು ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ ಮತ್ತೆ ಐದು ದಿನ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನಿಯಂತ್ರಣ ಸಮಿತಿ ತಿಳಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕೆಆರ್'ಎಸ್ ಮತ್ತು ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ ಮತ್ತೆ ಐದು ದಿನ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನಿಯಂತ್ರಣ ಸಮಿತಿ ತಿಳಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಗುರುವಾರ ನಡೆದ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಕಾವೇರಿ ನೀರು ನಿಯಂತ್ರಣ ಸಮಿತಿ ಬೆಂಗಳೂರಿನಲ್ಲಿ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದು, ಮುಂದಿನ 5 ದಿನಗಳ ಕಾಲ ಯಥಾಸ್ಥಿತಿಯಂತೆ ತಮಿಳುನಾಡು ರಾಜ್ಯಕ್ಕೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. 
ಸಿಡಬ್ಲ್ಯೂಆರ್'ಸಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿಯ ಜಲಸಂಪನ್ಮೂಲ ಇಲಾಖೆ ಅಧಿಕಾರಿ ಪ್ರತಿನಿಧಿಗಳು ಸೇರಿ ಒಟ್ಟು 9 ಮಂದಿ ಸದಸ್ಯರಿದ್ದಾರೆ. ಈ ಸಮಿತಿಯ ಸದಸ್ಯರು ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾವೇರಿ ವ್ಯಾಪ್ತಿಯ ನಾಲ್ಕೂ ಜಲಾಶಯಗಳ ನೀರಿನ ಮಟ್ಟ ಪರಿಶೀಲಿಸಿ ಈ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಜು.25ರಂದು ನಡೆದ ಸಮತಿ ಸಭೆಯಲ್ಲಿ ಎರಡೂ ಜಲಾಶಯಗಳಿಂದ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಅಷ್ಟೇ ಪ್ರಮಾಣದ ನೀರನ್ನು ಮತ್ತೆ ತಮಿಳುನಾಡು ರಾಜ್ಯಕ್ಕೆ ಹರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com