ಆಗಲ್ಲ, ಆಗಲ್ಲ, 10 ಗಂಟೆಗೆ ಕಚೇರಿಗೆ ಬರೋಕೆ ಸಾಧ್ಯವೇ ಇಲ್ಲ: ಸರ್ಕಾರಿ ನೌಕರರ ಪತ್ರ

ನಮಗೆ ಸರಿಯಾಗಿ 10 ಗಂಟೆಗೆ ಕಚೇರಿಗೆ ಬರಲು ಸಾಧ್ಯವೇ ಇಲ್ಲ ದಯವಿಟ್ಟು ರಿಯಾಯಿತಿ ಕೊಡಿ ಎಂದು ಸರ್ಕಾರಿ ನೌಕರರು ಪತ್ರ ಬರೆಯುವ ಮೂಲಕ ...
ವಿಧಾನಸೌಧ (ಸಂಗ್ರಹ ಚಿತ್ರ)
ವಿಧಾನಸೌಧ (ಸಂಗ್ರಹ ಚಿತ್ರ)
ಬೆಂಗಳೂರು:  ನಮಗೆ ಸರಿಯಾಗಿ 10 ಗಂಟೆಗೆ ಕಚೇರಿಗೆ ಬರಲು ಸಾಧ್ಯವೇ ಇಲ್ಲ ದಯವಿಟ್ಟು ರಿಯಾಯಿತಿ ಕೊಡಿ  ಎಂದು ಸರ್ಕಾರಿ ನೌಕರರು ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಅವರು ಮುಖ್ಯ ಕಾರ್ಯದರ್ಶಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. ದಿನಕ್ಕೆ 7.30 ಗಂಟೆ ಕೆಲಸ ಮಾಡಿ ನೌಕರರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಬಯೋಮೆಟ್ರಿಕ್ ಹಾಜರಾತಿಯಿಂದ ನೆಮ್ಮದಿ ಹಾಳಾಗಿದೆ. 
ಬೆಂಗಳೂರಿನ ಟ್ರಾಫಿಕ್​ನಲ್ಲಿ ಕಚೇರಿಗೆ ಬರುವುದು ದೊಡ್ಡ ಸವಾಲಾಗಿದೆ. ಈ ಎಲ್ಲ ಕಾರಣಗಳಿಂದ ನಮಗೆ ಕಚೇರಿಗೆ 10 ಗಂಟೆಯೊಳಗೆ ಬರಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಸಮಯವನ್ನು ಚೇಂಜ್ ಮಾಡಿ ಎಂದು ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘದಿಂದ ಪತ್ರ ಬರೆಯಲಾಗಿದೆ.
ಸರ್ಕಾರದ ಕಚೇರಿ ವೇಳೆ ಬೆಳಗ್ಗೆ 10.00ರಿಂದ ಸಂಜೆ 5.30 ಗಂಟೆಯಾಗಿದ್ದು, ನೌಕರರು ದಿನದಲ್ಲಿ 7.30 ಗಂಟೆ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಸಚಿವಾಲಯವು ಬೆಂಗಳೂರಿನ ಕೇಂದ್ರ ಸ್ಥಾನದಲ್ಲಿದ್ದು, ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಸ್ತೆ ಸಂಚಾರದ ದಟ್ಟಣೆಯು ಹೆಚ್ಚಾಗುತ್ತಿದೆ. ಹೀಗಾಗಿ ಕಚೇರಿ ಆರಂಭದ ವೇಳೆಗೆ ವಿಧಾನಸೌಧಕ್ಕೆ ಬರಲು ಸಾಧ್ಯವಾಗುತ್ತಿಲ್ಲ. 
ಇದರಿಂದ ನೌಕರರು ಹೆಚ್ಚಿನ ಒತ್ತಡಕ್ಕೆ ಒಳಗಾಗಿ ಅವರುಗಳ ಆರೋಗ್ಯ ಮೇಲೆ ತುಂಬಾ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿರುವುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ವಿವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com