ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಆ.04 ರಂದು ವಿಡಿಯೋ ಸಂವಾದ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ
ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ
ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಆ.04 ರಂದು ವಿಡಿಯೋ ಸಂವಾದ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 
ಸದ್ಯ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಪ್ರವಾಹ ಉಂಟಾಗಿದ್ದು ಹಲವು ಗ್ರಾಮಗಳು ಮುಳುಗಡೆಯಾಗಿದೆ. ಕೃಷಿ ಬೆಳೆ ಜೊತೆಗೆ ಆಸ್ತಿ ಪಾಸ್ತಿ ಮತ್ತು ಮನೆಗಳಿಗೆ ಹಾನಿಯಾಗಿದ್ದು, ಜನ ಮತ್ತು ಜಾನುವಾರುಗಳು ತೊಂದರೆಗೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದ್ದಾರೆ. 
ಮಹಾರಾಷ್ಟ್ರದ ಹಲವು ಅಣೆಕಟ್ಟುಗಳಿಂದ ದಿಢೀರ್ ನೀರು ಬಿಡುಗಡೆಯಿಂದಾಗಿ ರಾಜ್ಯದ ಕೆಳಮಟ್ಟದಲ್ಲಿರುವ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿದ್ದು ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳೊಡನೆ ಸಂಪರ್ಕ ಸಾಧಿಸಿ, ಅಣೆಕಟ್ಟುಗಳಿಂದ ನೀರು ಹರಿಸುವ ಮುನ್ನ ಮಾಹಿತಿ ನೀಡುವಂತೆ ಹಾಗೂ ನದೀ ತೀರದ ಜನರನ್ನು ಎಚ್ಚರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 
ಅಗ್ನಿಶಾಮಕ ದಳ, ಪೊಲೀಸ್, ಕಂದಾಯ ಮತ್ತಿತರ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಅಹೋರಾತ್ರಿ ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದೂ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com